ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಮಹೇಂದ್ರ ಸಿಂಗ್‍ ಧೋನಿ, ಸುರೇಶ್‍ ರೈನಾ ವಿದಾಯ

ನವದೆಹಲಿ: ಭಾರತ ಕ್ರಿಕೆಟ್‍ ತಂಡದ ಯಶಸ್ವಿ ನಾಯಕನೆಂದೇ ಖ್ಯಾತವಾಗಿರುವ ಮಹೇಂದ್ರಸಿಂಗ್‍ ಧೋನಿ  ಮತ್ತು ಎಡಗೈ ಬ್ಯಾಟ್ಸ್‍ಮನ್‍ ಸುರೇಶ್‍ ರೈನಾ  ಎಲ್ಲಾ ಬಗೆಯ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ನಿವೃತ್ತಿ ಘೋಷಿಸಿದ್ದಾರೆ.

ಎಂ.ಎಸ್‍.ಧೋನಿ ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ವಿದಾಯ ಘೋಷಣೆ ಮಾಡಲಿದ್ದಾರೆ ಎಂದು ಎರಡು ವರ್ಷಗಳಿಂದ ಚರ್ಚೆ ನಡೆಯುತ್ತಿತ್ತು. ಆದರೆ ಈ ಬಗ್ಗೆ ಸೂಕ್ತ ಸಮಯದಲ್ಲಿ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳುತ್ತಿದ್ದ ಧೋನಿ ಈಗ ವಿದಾಯ ಘೋಷಿಸಿದ್ದಾರೆ. ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ https://www.instagram.com/p/CD6ZQn1lGBi/ ವಿಡಿಯೊವನ್ನು ಪೋಸ್ಟ್‌ ಮಾಡಿರುವ ಧೋನಿ,

ನಿಮ್ಮ ಪ್ರೀತಿ, ಅಭಿಮಾನ ಮತ್ತು ಬೆಂಬಲಕ್ಕೆ ನನ್ನ ಧನ್ಯವಾದಗಳು. ಇಂದು (ಶನಿವಾರ) ಸಂಜೆ 7.29ಕ್ಕೆ ಕ್ಕೆ ನಾನು ನಿವೃತ್ತಿ ಹೊಂದಿದ್ದೇನೆ ಎಂದು ಬರೆದುಕೊಂಡಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.ಭಾರತಕ್ಕೆ ಎರಡು ಬಾರಿ ವಿಶ್ವಕಪ್ ತಂದುಕೊಂಡ ಕೀರ್ತಿ ಧೋನಿಗೆ ಸಲ್ಲುತ್ತದೆ. ಧೋನಿ ಕೊನೆಯ ಬಾರಿ 2019 ವಿಶ್ವಕಪ್​ನಲ್ಲಿ ಸೆಮಿ ಫೈನಲ್​ನಲ್ಲಿ ನ್ಯೂಜಿಲೆಂಡ್ ವಿರುದ್ಧ ಕಣಕ್ಕಿಳಿದಿದ್ದರು.

2019 ಏಕದಿನ ವಿಶ್ವಕಪ್‌ನಲ್ಲಿ ಸೆಮಿಫೈನಲ್ ಸೋಲಿನ ಬಳಿಕ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಹಿರಿಯ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ, ಕ್ರಿಕೆಟ್ ರಂಗದಿಂದ ದೂರವುಳಿದಿದ್ದರು. ಸುದೀರ್ಘ ವಿಶ್ರಾಂತಿಯಲ್ಲಿದ್ದ ಮಹಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪುನರಾಗಮನ ಮಾಡುತ್ತಾರ ಅಥವಾ ಇಲ್ಲವೇ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ಹುಟ್ಟಿಕೊಂಡಿದ್ದವು. ಅಲ್ಲದೆ ಟಿ-20 ವಿಶ್ವಕಪ್‌ನಲ್ಲೂ ಭಾಗವಹಿಸುವರೇ ಎಂಬುದು ಅನುಮಾನವೆನಿತ್ತು. ಈ ಮಧ್ಯೆ ಬಿಸಿಸಿಐ ವಾರ್ಷಿಕ ಗುತ್ತಿಗೆ ಒಪ್ಪಂದದಿಂದಲೂ ವಿಶ್ವಕಪ್ ವಿಜೇತ ಮಾಜಿ ನಾಯಕರನ್ನು ಹೊರಗಿಡಲಾಗಿತು. ಯುವ ಆಟಗಾರರಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಕ್ರಿಕೆಟ್ ರಂಗದಿಂದ ದೂರವುಳಿದಿದ್ದ 38ರ ಹರೆಯದ ಮಹೇಂದ್ರ ಸಿಂಗ್ ಧೋನಿ ಸದ್ಯ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಸಲ್ಲಿಸುವ ಮೂಲಕ ಭಾರತ ತಂಡದಿಂದ ದೂರ ಸರಿದಿದ್ದಾರೆ.

2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಎಂಎಸ್ ಧೋನಿ ಪದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2007ರ ಟಿ-20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು. ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ. ’ಕ್ಯಾಪ್ಟನ್ ಕೂಲ್‘ ಎಂದೇ ಖ್ಯಾತರಾಗಿರುವ ಧೋನಿ ಮುಂದಿನ ತಿಂಗಳು ಯುಎಇಯಲ್ಲಿ ನಡೆಯಲಿರುವ ಐಪಿಎಲ್ 13ನೇ ಆವೃತ್ತಿಯಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಮುನ್ನಡೆಸುವರು. ಪೂರ್ವಸಿದ್ಧತಾ ಶಿಬಿರದಲ್ಲಿ ಭಾಗವಹಿಸಲು ಅವರು ಶುಕ್ರವಾರ ಚೆನ್ನೈಗೆ ಬಂದಿಳಿದ್ದಾರೆ

ಜಾರ್ಖಂಡ್ ರಾಜಧಾನಿ ರಾಂಚಿಯ ಧೋನಿ ಹೆಚ್ಚಾಗಿ ಬ್ಯಾಟಿಂಗ್ ಮಾಡಿದ್ದು 5 ಅಥವಾ 7ನೇ ಕ್ರಮಾಂಕದಲ್ಲಿ. ಆದರೂ 350 ಏಕದಿನ ಪಂದ್ಯಗಳಿಂದ 10773 ರನ್‌ಗಳನ್ನು ಗಳಿಸಿದ್ದಾರೆ. ಅದರಲ್ಲಿ10 ಶತಕ ಮತ್ತು 73 ಅರ್ಧಶತಕಗಳು ಇವೆ.90 ಟೆಸ್ಟ್‌ಗಳಲ್ಲಿ 4876 ರನ್‌ ಗಳನ್ನು ಕಲೆಹಾಕಿದ್ದರು. ಅದರಲ್ಲಿ ಆರು ಶತಕ, ಒಂದು ದ್ವಿಶತಕ ಮತ್ತು 33 ಅರ್ಧಶತಕಗಳು ಸೇರಿವೆ.ಟಿ20 ಕ್ರಿಕೆಟ್‌ನಲ್ಲಿ 98 ಪಂದ್ಯಗಳನ್ನು ಆಡಿ 4432 ರನ್‌ಗಳನ್ನು ಗಳಿಸಿದ್ದಾರೆ. ಎರಡು ಅರ್ಧಶತಕಗಳು ಇವೆ.

Donate Janashakthi Media

Leave a Reply

Your email address will not be published. Required fields are marked *