ಅನಾಥಶ್ರಮದಲ್ಲಿ ಸಮೋಸ ಸೇವಿಸಿ ಮೂವರು ಬಾಲಕಿಯರ ಸಾವು!

ಸಮೋಸ ಸೇವಿಸಿದ ಅನಾಥಾಶ್ರಮದ ಮೂವರು ಬಾಲಕಿಯರು ಮೃತಪಟ್ಟಿದ್ದು, 24ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಆಂಧ್ರಪ್ರದೇಶದ ಅನಕಪಳ್ಳಿ ಜಿಲ್ಲೆಯಲ್ಲಿ ಸಂಭವಿಸಿದೆ.

ಒಂದನೇ ತರಗತಿಯ ವಿದ್ಯಾರ್ಥಿನಿ ಜೋಶ್ನಾ, ಮೂರನೇ ತರಗತಿ ವಿದ್ಯಾರ್ಥಿನಿಯರಾದ ಭವಾನಿ ಮತ್ತು ಶ್ರದ್ಧಾ ಮೃತಪಟ್ಟಿದ್ದಾರೆ.

ಕೊತ್ತುರತ್ತಲ ಮಂಡಲ್ ನ ಕೈಲಾಸ ಪಟ್ಟಣದಲ್ಲಿರುವ ಅನಾಥಾಶ್ರಮದಲ್ಲಿ ಭಾನುವಾರ ಈ ಘಟನೆ ಸಂಭವಿಸಿದೆ. ಸಮೋಸಾ ಸೇವಿಸಿದ 27 ಮಕ್ಕಳು ಅಸ್ವಸ್ಥಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಮೂವರು ಮೃತಪಟ್ಟಿದ್ದಾರೆ.

ಫುಡ್ ಪಾಯ್ಸನ್ ಆದ ಕಾರಣ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದ್ದು, ಆಸ್ಪತ್ರೆಯಲ್ಲಿ 24 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಇದರಲ್ಲಿ ಗಂಭೀರ ಸ್ಥಿತಿಯಲ್ಲಿರುವ 17 ಮಂದಿಯನ್ನು ಹೆಚ್ಚಿನ ಚಿಕಿತ್ಸೆಗೆ ವಿಶಾಖಪಟ್ಟಣದ ಮತ್ತೊಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಆನಾಥಾಶ್ರಮದಲ್ಲಿ 60 ಮಕ್ಕಳು ಇದ್ದು, ಈ ಮಕ್ಕಳನ್ನು ಸರ್ಕಾರಿ ಶಾಲೆಯಲ್ಲಿ ಓದಿಸಲಾಗುತ್ತಿದೆ. ಅನಕಪಳ್ಳಿ ಜಿಲ್ಲಾಧಿಕಾರಿ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆಗೆ ಆದೇಶಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *