ನವದೆಹಲಿ : ಬ್ಯಾಂಕ್ ಖಾತೆಗಳಿಂದ ಆನ್ ಲೈನ್ ಮೂಲಕ ಹಣ ವರ್ಗಾವಣೆ ಮೇಲಿದ್ದ ಶುಲ್ಕ ಕಡಿತಗೊಳಿಸಿದ್ದ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಗ್ರಾಹಕರಿಗೆ ಈ ಮೂಲಕ ಮತ್ತೊಂದು ಸಿಹಿ ಸುದ್ದಿ ನೀಡಿದೆ.
ಇಂದಿನಿಂದ ರಿಯಲ್ ಟೈಮ್ ಗ್ರಾಸ್ ಸೆಟ್ಲ್ ಮೆಂಟ್ (ಆರ್ ಟಿಜಿಎಸ್) ವ್ಯವಸ್ಥೆ ದಿನದ 24 ಗಂಟೆ ಕಾರ್ಯ ನಿರ್ವಹಿಸಲಿದೆ ಎಂದು ಆರ್ ಬಿ ಐ ಗವರ್ನರ್ ಶಕ್ತಿಕಾಂತ ದಾಸ್ ಭಾನುವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಕಳೆದ ಡಿಸೆಂಬರ್ 1 ರಿಂದಲೇ ಈ ಸೇವೆ ಜಾರಿಗೆ ಬರಬೇಕಿತ್ತು. ಆದರೆ ಕೆಲವು ಅಡೆತಡೆಗಳಿಂದ ವಿಳಂಬಗಳಾಗಿದ್ದು, ಸೂಮುವಾರದಿಂದ ಅಂದರೆ ಇಂದಿನಿಂದ ಆರ್ ಟಿಜಿಎಸ್ ಸೇವೆ ಜಾರಿಗೊಳಲಿದೆ ಎಂದಿದ್ದಾರೆ. ಇತಂಹ ಸೌಲಭ್ಯ ಕಲ್ಪಿಸಿದ ಸೇವೆಗಳಲ್ಲಿಯೂ ಭಾರತವು ಸೇರ್ಪಡೆಯಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಮೊದಲು ಬೆಳಗ್ಗೆ 8 ರಿಂದ ರಾತ್ರಿ 7ರ ತನಕ ಮಾತ್ರ ಲಭ್ಯವಿರುತ್ತಿದ್ದ ನೆಫ್ಟ್ ಕಳೆದ ಡಿಸೆಂಬರ್ ತಿಂಗಳಿನಿಂದ ದಿನದ 24 ಗಂಟೆಗಳ ಕಾಲ ಬಳಕೆಗೆ ಲಭ್ಯವಾಗಿದೆ. ಅಲ್ಲದೆ ಎರಡನೇ ಹಾಗೂ ನಾಲ್ಕನೇ ಶನಿವಾರ, ಭಾನುವಾರ ಬಳಕೆ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಈಗ ಇದರ ಸೇವೆ ದಿನದ 24 ಗಂಟೆಗೆ ಹೆಚ್ಚಳಗೊಂಡಿದ್ದು ಗ್ರಾಹಕರಿಗೆ ಅನುಕೂಲವಾಗುತ್ತದೆ ಎಂದು ಹೇಳಿದ್ದಾರೆ.