ಕಲಬುರಗಿ : ಕರ್ನಾಟಕ ವಿಧಾನ ಪರಿಷತ್ನಲ್ಲಿ ಮೂರು ತಿಂಗಳಿನಿಂದ ತೆರವಾಗಿರುವ ಎರಡು ಪದವೀಧರ ಹಾಗೂ ಎರಡು ಶಿಕ್ಷಕ ಕ್ಷೇತ್ರಗಳು ಸೇರಿ ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ.
ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯು ಅಕ್ಟೋಬರ್ 1ರಿಂದ ಶುವಾಗಿದ್ದು, ನಾಳೆ ಅಂದರೆ ಅ. 8 ಕೊನೆಯ ದಿನವಾದ ಕಾರಣ ಇಂದು ಬಿಜೆಪಿಯ ಅಭ್ಯರ್ಥಿಯಾಗಿ ಶಶೀಲ್ ನಮೋಶಿ, ಕಾಂಗ್ರೆಸ್ ನ ಅಭ್ಯರ್ಥಿಯಾಗಿ ಶರಣಪ್ಪ ಮಟ್ಟೂರು ಬುಧವಾರ ವಿಧಾನ ಪರಿಷತ್ ನ ಈಶಾನ್ಯ ಪದವೀಧರ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಯಾಗಿ ನಗರದ ಮಿನಿ ವಿಧಾನಸೌಧದಲ್ಲಿ ಚುನಾವಣಾಧಿಕಾರಿ ಹಾಗೂ ಕಲಬುರಗಿ ಪ್ರಾದೇಶಿಕ ಆಯುಕ್ತ ಎನ್ ವ್ಹಿ ಪ್ರಸಾದ್ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಕೆಎಸ್ ಈಶ್ವರಪ್ಪ, ಶಾಸಕರಾದ ಬಸವರಾಜ್ ಮತ್ತಿಮೂಡ್, ದತ್ತಾತ್ರೇಯ ಪಾಟೀಲ್ ರೇವೂರ್ ಅವರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆ ದಿನಾಂಕ
ನಾಮಪತ್ರ ಸಲ್ಲಿಕೆ ಪ್ರಕ್ರಿಯೆ: ಅಕ್ಟೋಬರ್ 1ರಿಂದ
ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಅಕ್ಟೋಬರ್ 8
ನಾಮಪತ್ರ ಪರಿಶೀಲನೆ: ಅಕ್ಟೋಬರ್ 9
ನಾಮಪತ್ರ ಹಿಂಪಡೆಯಲು ಕೊನೆಯ ದಿನ: ಅಕ್ಟೋಬರ್ 12
ಮತದಾನ: ಅಕ್ಟೋಬರ್ 28
ಮತದಾನ ಸಮಯ: ಬೆಳಗ್ಗೆ 8ರಿಂದ ಸಂಜೆ 5ರವರೆಗೆ
ಮತ ಎಣಿಕೆ: ನವೆಂಬರ್ 2