ಉತ್ತರ ಪ್ರದೇಶ್ ಬಜೆಟ್ ಅಧಿವೇಶನ : ಸಮಾಜವಾದಿ ಪಕ್ಷದಿಂದ ಸಭಾತ್ಯಾಗ

ಲಖನೌ ಫೆ 18: ಉತ್ತರ ಪ್ರದೇಶ ವಿಧಾನಸಭೆಯ ಬಜೆಟ್ ಅಧಿವೇಶನ ಇಂದು ಪ್ರಾರಂಭವಾಗಿದೆ. ಆಡಳಿತಾರೂಢ ಬಿಜೆಪಿ ಪಕ್ಷದ ಆಡಳಿತದ ವಿಫಲತೆಗಳ ವಿರುದ್ಧ ಸಮಾಜವಾದಿ ಪಕ್ಷದ ಶಾಸಕರು ವಿಧಾನಸಭೆಯೊಳಗೆ ಘೋಷಣೆ ಕೂಗುತ್ತಾ ಸಭಾ ತ್ಯಾಗ ಮಾಡಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.

 

ಸದನದ  ಜಂಟಿ ಅಧಿವೇಶನದಲ್ಲಿ ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರ ಭಾಷಣ ಶುರುವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಶಾಸಕರು ಆಡಳಿತಾರೂಢ ಬಿಜೆಪಿ ಪಕ್ಷವು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಸಮಾಜವಾದಿ ಪಕ್ಷದ ಶಾಸಕರು ಬಿಜೆಪಿ ಪಕ್ಷದ ವಿರುದ್ದ ಘೋಷಣೆಗಳನ್ನು ಕೂಗಿದರು.

ಜನಶಕ್ತಿ ಮೀಡಿಯಾ ವಾಟ್ಸಪ್ ಸೇರಿಕೊಳ್ಳಲು ಈ ಲಿಂಕ್ ಕ್ಲಿಕ್ ಮಾಡಿ

ಯುಪಿಯಲ್ಲಿ ಬಿಜೆಪಿ ಸರ್ಕಾರ ಬಂದಾಗಿನಿಂದಲೂ, ಮಹಿಳಾ ಬಾಲಕಿಯರ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳು ಹೆಚ್ಚಾಗುತ್ತಿವೆ.  ಮತ್ತು ಬಡ ಹಿಂದುಳಿದ ಮಹಿಳೆಯರಿಗೆ ಕಿರುಕುಳ ನೀಡುವ ಘಟನೆಗಳು ಉತ್ತುಂಗಕ್ಕೆ ಏರಿವೆ. ಕೃಷಿಕಾಯ್ದೆ ರದ್ದು ಮಾಡುವಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ, ಅವರ ಬೇಡಿಕೆ ಈಡೇರಿಸುವ ಕಡೆ ಗಮನ ನೀಡುತ್ತಿಲ್ಲ. ಲವ್ ಜಿಹಾದ್ ಹೆಸರಿನಲ್ಲಿ ಕೋಮುಗಲಬೆ ಎಬ್ಬಿಸಲಾಗುತ್ತಿದೆ ಎಂದು ಸಮಾಜವಾದಿ ಪಕ್ಷದ ಶಾಸಕರು ಸಭಾ ತ್ಯಾಗ ಮಾಡುವ ಮೂಲಕ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

 

Donate Janashakthi Media

Leave a Reply

Your email address will not be published. Required fields are marked *