ಸೆ. 21- 29ವರೆಗೆ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ
ಕರ್ನಾಟಕ : ಕೋವಿಡ್-19 ವ್ಯಾಪಕವಾಗಿ ಹರಡುವಿಕೆ ಭಯಬೀತಿಯ ನಡುವೆಯೇ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆದಿವೆ. ಆಗಸ್ಟ್ 10ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿತ್ತು. ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆಗಳು ಸೆಪ್ಟೆಂಬರ್ 21 ರಿಂದ ಸೆಪ್ಟೆಂಬರ್ 29ರ ವರೆಗೆ ನಡೆಯಲಿವೆ.
ಈ ಪರೀಕ್ಷೆಯಲ್ಲಿ ಕಾರಣಾಂತರಗಳಿಂದ ಗೈರು ಹಾಜರಾಗಿರುವ ವಿದ್ಯಾರ್ಥಿಗಳು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಆಯಾ ವಿಷಯಗಳಲ್ಲಿ ಉತ್ತೀರ್ಣರಾಗಿ ಮುಂದಿನ ವಿದ್ಯಾಭ್ಯಾಸಕ್ಕೆ ಸೇರಿಕೊಳ್ಳಲು ಅನುವು ಮಾಡಿಕೊಡುವ ಸಲುವಾಗಿ ಪೂರಕ ಪರೀಕ್ಷೆ ಆಯೋಜಿಸಲಾಗಿದೆ.
ಪರಿಕ್ಷೆಯ ವೇಳಾಪಟ್ಟಿ ಹೀಗಿದೆ.
ಸೆಪ್ಟೆಂಬರ್ 21 – ಗಣಿತ, ಸಮಾಜಶಾಸ್ತ್ರ,
ಸೆಪ್ಟೆಂಬರ್ 22 – ಪ್ರಥಮ ಭಾಷೆ ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉದ್ರು, ಇಂಗ್ಲಿಷ್, ಸಂಸ್ಕ್ರತ)
ಸೆಂಪ್ಟೆಂಬರ್ 23 – ಸಮಾಜ ವಿಜ್ಞಾನ,
ಸೆಪ್ಟೆಂಬರ್ 24 – ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ),
ಸೆಪ್ಟೆಂಬರ್ 25 – ತೃತಿಯ ಭಾಷೆ (ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್ ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು) ಎನ್‌ಎಫ್ ಕ್ಯೂ ಆಫ್ ಪರೀಕ್ಷೆಗಳು,
ಸೆಪ್ಟೆಂಬರ್ 26 – ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್, ಎಲಿಮೆಂಟ್ಸ್ ಆಫ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್, ಗ್ರಾಫಿಕ್ಸ್, ಅರ್ಥಶಾಸ್ತ್ರ,
ಸೆಪ್ಟೆಂಬರ್ 28- ಬೆಳಿಗ್ಗೆ ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ ಕರ್ನಾಟಕ ಸಂಗೀತ, ಹಿಂದುಸ್ತಾನಿ ಸಂಗೀತ,
ಸೆಪ್ಟೆಂಬರ್ 29 – ಜೆಟಿಎಸ್ ಪ್ರಾಯೋಗಿಕ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ತಿಳಿಸಿದೆ.