ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪುತ್ರ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದು, ಗ್ರೇಗ್ ಬ್ರಾಕ್ಲೆ ಸ್ಥಾನ ತುಂಬಲಿದ್ದಾರೆ ಎಂದು ಹೇಳಲಾಗಿದೆ.
ಐಸಿಸಿ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಅಧ್ಯಕ್ಷರ ಚುನಾವಣೆ ನಡೆಯಲಿದ್ದು, ಜೈ ಶಾ ಪರವಾಗಿ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗಳು ಬೆಂಬಲಿಸುವ ಸಾಧ್ಯತೆ ಇದೆ.
ಐಸಿಸಿ ಮುಖ್ಯಸ್ಥ ಸ್ಥಾನಕ್ಕೆ ಕ್ರಿಕೆಟ್ ಆಸ್ಟ್ರೇಲಿಯಾದ ಮೈಕ್ ಬ್ರೈಡ್ ಹಿಂದೆ ಸರಿಯುವ ಸೂಚನೆ ನೀಡಿದ್ದಾರೆ. ಇದೇ ವೇಳೆ ನಡೆದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಮೂರನೇ ಬಾರಿ ಸ್ಪರ್ಧಿಸಲು ಆಸಕ್ತಿ ಕಳೆದುಕೊಂಡಿದ್ದೇನೆ ಎಂದು ಬ್ರೈಡ್ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಯಲಿದೆ ಎಂದು ಹೇಳಲಾಗಿದೆ.