ಕಠ್ಮಂಡು |ಪ್ರತಿಭಟನೆ ಹಿಂಸಾಚಾರ 25 ಮಂದಿ ಮೃತ – ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ

ಕಠ್ಮಂಡು: ನೇಪಾಳದ ವಿವಿಧೆಡೆ ಯುವಕರು ನಡೆಸಿದ ಬೃಹತ್‌ ಪ್ರತಿಭಟನೆ  ಹಿಂಸಾಚಾರಕ್ಕೆ ತಿರುಗಿ 25 ಮಂದಿ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ನೇಪಾಳ ಪ್ರಧಾನಿ ಕೆ.ಪಿ.ಶರ್ಮಾ ಓಲಿ ಮಂಗಳವಾರ ಮಧ್ಯಾಹ್ನ ರಾಜೀನಾಮೆ ನೀಡಿದ್ದಾರೆ. ಕಠ್ಮಂಡು

ಇದನ್ನೂ ಓದಿ: ಹಾರೋಹಳ್ಳಿ | ಅರ್ಧಕ್ಕೆ ನಿಂತಿರುವ ಭವನಗಳು ದನದ ಕೊಟ್ಟಿಗೆಯಂತೆ ಬಳಕೆಯಾಗುತ್ತಿವೆ. 

ಆದರೆ ನೇಪಾಳದಲ್ಲಿ ಪ್ರಧಾನಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದರಿಂದ ಸರ್ಕಾರ ಬೀಳುತ್ತದೆ ಎಂದರ್ಥವಲ್ಲ. ನೇಪಾಳದಲ್ಲಿ ಪ್ರಧಾನಮಂತ್ರಿ ಕಾರ್ಯನಿರ್ವಾಹಕ ಮುಖ್ಯಸ್ಥರಾಗಿದ್ದು, ರಾಷ್ಟ್ರಪತಿ ಅವರು ಸರ್ಕಾರದ ಮುಖ್ಯಸ್ಥರಾಗಿದ್ದಾರೆ. ಓಲಿ ಅವರ ರಾಜೀನಾಮೆ ಕೂಡ ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳಲ್ಲಿ ಒಂದಾಗಿತ್ತು. ಕಠ್ಮಂಡು

ಮೂಲಗಳ ಪ್ರಕಾರ, ರಾಷ್ಟ್ರಪತಿ ರಾಜೀನಾಮೆ ನೀಡುವುದರಿಂದ ಸರ್ಕಾರ ಸಂಪೂರ್ಣವಾಗಿ ಉರುಳಲಿದೆ ಎಂದು ರಾಜಕೀಯ ತಜ್ಞರು ಹೇಳಿದ್ದಾರೆ. ಕಳೆದ ಎರಡು ದಿನಗಳಿಂದ ನಡೆದ ಪ್ರತಿಭಟನೆಯಲ್ಲಿ 25 ಮಂದಿ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ನೇಪಾಳದ ಮಾಧ್ಯಮಗಳು ವರದಿ ಮಾಡಿವೆ. 

ಭ್ರಷ್ಟಾಚಾರ ನಿಯಂತ್ರಿಸುವಂತೆ ಆಗ್ರಹಿಸಿ ಶಾಲಾ ವಿದ್ಯಾರ್ಥಿಗಳು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಯುವಕರು ದೇಶದಾದ್ಯಂತ ‘ಜೆನ್‌–ಝೀ’ ಬ್ಯಾನರ್‌ ಅಡಿಯಲ್ಲಿ ‍ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ತೀವ್ರಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಸರ್ಕಾರ ಸಾಮಾಜಿಕ ಜಾಲತಾಣಗಳ ಮೇಲೆ ನಿಷೇಧ ಹೇರಿತು.

ಇದನ್ನೂ ನೋಡಿ: ಗೌರಿ ನೆನಪು : ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲ – ಡಾ. ಎಂ.ಎಸ್. ಆಶಾದೇವಿ – Janashakthi Media

Donate Janashakthi Media

Leave a Reply

Your email address will not be published. Required fields are marked *