ಕನ್ನಡಿಗ ಪ್ರತಿನಿಧಿಗಳೇ ಇಲ್ಲದೆ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೇ?

  • ಕೇಂದ್ರ ಸರ್ಕಾರ ರಚಿಸಿರುವ 12 ಜನರ ತಜ್ಞ ಸಮಿತಿಗೆ ಮಾಜಿ ಸಿಎಂ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕನ್ನಡಿಗ ಪ್ರತಿನಿಧಿಗಳೇ ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧ್ಯವೆ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ, ಕೇಂದ್ರ ಸರ್ಕಾರ ರಚಿಸಿರುವ ಸಮಿತಿಯಲ್ಲಿ ದಕ್ಷಿಣ ಭಾರತಕ್ಕೆ ಸಂಬಂಧಿಸಿದವರನ್ನು ಸದಸ್ಯರನ್ನಾಗಿ ನೇಮಿಸದೇ ಇರುವುದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ‘ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ, ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಭಾರತದ 12 ಸಾವಿರ ವರ್ಷಗಳ ಇತಿಹಾಸ, ಸಂಸ್ಕೃತಿ ಮತ್ತು ಜಗತ್ತಿನ ಇತರ ಸಂಸ್ಕೃತಿಗಳೊಂದಿಗಿನ ಸಂಪರ್ಕದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸರ್ಕಾರ 16 ಸದಸ್ಯರ ತಜ್ಞರ ಸಮಿತಿ ರಚಿಸಿದೆ. ಆದರೆ ಇದರಲ್ಲಿ ಕನ್ನಡಿಗರಾಗಲಿ, ದ್ರಾವಿಡ ಪರಂಪರೆಯ ಜ್ಞಾನವಿರುವ ದಕ್ಷಿಣ ಭಾರತೀಯರಾಗಲಿ, ಮಹಿಳೆಯರಾಗಲಿ ಇಲ್ಲವೇ ಇಲ್ಲವಾಗಿರುವುದು ದುರದೃಷ್ಟಕರ.

‘ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ, ಉತ್ತರ ಭಾರತೀಯರು ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ’ ಎಂದು ಆಗ್ರಹಿಸಿದ್ದಾರೆ.

‘ಕನ್ನಡಿಗ ಪ್ರತಿನಿಧಿಗಳು ಇಲ್ಲದೇ ಕರ್ನಾಟಕದ ಚರಿತ್ರೆ, ಪರಂಪರೆಯ ನಿಷ್ಪಕ್ಷಪಾತ ಅಧ್ಯಯನ ಸಾಧವೇ? ದಕ್ಷಿಣ ಭಾರತೀಯರಿಲ್ಲದೇ ಒಟ್ಟು ಭಾರತದ ಇತಿಹಾಸ ಅಧ್ಯಯನಕ್ಕೆ ಒಳಪಡುವುದಾದರೂ ಹೇಗೆ? ಈ ದೇಶವನ್ನು ಅಂಬೆಗೆ ಹೋಲಿಸಿದವರು ನಾವು. ಹೆಣ್ಣನ್ನು ಪೂಜಿಸುವ ದೇಶದ ಸಂಸ್ಕೃತಿ ಅಧ್ಯಯನ ಮಾಡುವ ಸಮಿತಿಯಲ್ಲಿ ಮಹಿಳೆಗೆ ಸ್ಥಾನವೇ ಇಲ್ಲವಾಗಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಇತಿಹಾಸ, ಸಂಸ್ಕೃತಿ ವಿಚಾರವಾಗಿ ಪೂರ್ವಾಗ್ರಹಗಳನ್ನು ಹೊಂದಿರುವಂತೆ ಕಾಣುವ,ಉತ್ತರ ಭಾರತೀಯರೇ ತುಂಬಿರುವ ಈ ಸಮಿತಿ ನಡೆಸುವ ಅಧ್ಯಯನದ ವಸ್ತುನಿಷ್ಠತೆ ಬಗ್ಗೆ ಅನುಮಾನಗಳು ದಟ್ಟವಾಗಿವೆ. ಸಮಿತಿಯ ಪುನಾರಚನೆ ಮಾಡುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಲಿ

Donate Janashakthi Media

Leave a Reply

Your email address will not be published. Required fields are marked *