ಬೆಂಗಳೂರು : ರೈತ ವಿರೋಧಿ ಕೃಷಿ ಕಾಯ್ದೆಗಳ ವಿರುದ್ಧ ನಿರಂತರ ಹೋರಾಡುತ್ತಿರುವ ರೈತರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಶಾಸಕರು ಕಲಾಪ ಬಹಿಷ್ಕರಿಸಿ ಕಾಲ್ನಡಿಗೆಯ ಮೂಲಕ ರೈತರ ಹೋರಾಟಕ್ಕೆ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಸಿಎಲ್ ಪಿ ತುರ್ತು ಸಭೆಯ ಬಳಿಕ ತೆಗೆದುಕೊಂಡ ತಿರ್ಮಾನದಂತೆ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರಸ್ ಶಾಸಕರು ಸೇರಿದಂತೆ ನೇರವಾಗಿ ವಿಧಾನಸೌಧದಿಂದ ಫ್ರಿಂಡಂ ಪಾರ್ಕ್ ಗೆ ಪಾದಯಾತ್ರ ಮಾಡುವುದರ ಮೂಲಕ ರೈತರೊಂದಿಗೆ ಹೋರಾಟದಲ್ಲಿ ಭಾಗವಹಿಸಿ ರೈತರಿಗೆ ಬೆಂಬಲವನ್ನು ನೀಡಿದ್ದಾರೆ.
ಇದನ್ನೂ ಓದಿ : https://janashakthimedia.com/msp-endarenu-kendra-krushi-kayde-raithara-bhaya-mattu-horata
ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ವಿಧಾನಸೌಧದಿಂದ ಫ್ರೀಡಂ ಪಾರ್ಕ್ ವರೆಗೆ ಗುರುವಾರ ನಡೆದ ಕಾಂಗ್ರೆಸ್ ಮುಖಂಡರು ಹಾಗೂ ಶಾಸಕರ ಪ್ರತಿಭಟನಾ ನಡಿಗೆಯಲ್ಲಿ ಕೆಪಿಸಿಸಿ ಆಧ್ಯಕ್ಷ ಡಿ.ಕೆ. ಶಿವಕುಮಾರ್, ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಮಾಜಿ ಸಚಿವರಾದ ಯು.ಟಿ. ಖಾದರ್, ಜಮೀರ್ ಅಹಮದ್ ಖಾನ್ ಮತ್ತಿತರರು ಭಾಗವಹಿಸಿದ್ದರು.