ಕಾಂಗ್ರೆಸ್ ಮುಗಿಸ್ತೀವಿ ಅನ್ನೋ ಭ್ರಮೆಯಲ್ಲಿದೆ ಬಿಜೆಪಿ: ಸಿದ್ದರಾಮಯ್ಯ

ನನ್ನನ್ನು ರಾಜಕೀಯವಾಗಿ ಮುಗಿಸಿದರೆ ಇಡೀ ಕಾಂಗ್ರೆಸ್ ಮುಗಿಸಿದಂಗಾಗುತ್ತೆ ಅಂತಾ ಟಾರ್ಗೆಟ್ ಮಾಡ್ತಿದ್ದಾರೆ. ಇದು ಅವರ ಭ್ರಮೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯಪಾಲರ ತೀರ್ಮಾನದ ವಿರುದ್ಧ ಹೈಕೋರ್ಟ್ ಗೆ ದೂರು ಸಲ್ಲಿಸಿದ ನಂತರ ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಿ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದೇವೆ. ಪ್ರಾಸಿಕ್ಯೂಷನ್​ಗೆ ತಡೆಯಾಜ್ಞೆ ಕೋರಿ ಅರ್ಜಿ ಸಲ್ಲಿಸಿದ್ದೇವೆ. ಬೆಂಗಳೂರಿಗೆ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಬರುತ್ತಿದ್ದಾರೆ. ನ್ಯಾಯಾಲಯದ ಮೇಲೆ ನನಗೆ ಸಂಪೂರ್ಣ ವಿಶ್ವಾಸ ಇದೆ ಎಂದರು.

ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. 40 ವರ್ಷದ ರಾಜಕೀಯ ಜೀವನದಲ್ಲಿ ಯಾವ ಕಪ್ಪುಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ನಾನು ಯಾವತ್ತೂ ತಪ್ಪು ಮಾಡಿಲ್ಲ, ಮಾಡೋದೂ ಇಲ್ಲ. ಮಸಿ ಬಳಿಯಬೇಕು ಅಂತಾ ಈ ರೀತಿ ಆರೋಪ ಮಾಡ್ತಿದ್ದಾರೆ. ರಾಜಕೀಯ ದುರುದ್ದೇಶದಿಂದ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಇದೇ ವೇಳೆ ಮಾನಸಿಕವಾಗಿ ನೀವು ಡಲ್​ ಆಗಿದ್ದೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ಡಲ್​ ಆಗಿಲ್ಲ, ಇನ್ನೂ ಸ್ಟ್ರಾಂಗ್ ಆಗಿದ್ದೇನೆ. ಬಿಜೆಪಿ-ಜೆಡಿಎಸ್ ತಂತ್ರಗಾರಿಕೆಗೆ ಬಗ್ಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಆಗಸ್ಟ್ 23ರಂದು‌ ದೆಹಲಿ ಪ್ರವಾಸ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದರು. ಶುಕ್ರವಾರ ದೆಹಲಿಗೆ ಹೊಗ್ತಿದ್ದೀನಿ. ಖರ್ಗೆಯವರು ಬೆಂಗಳೂರಿಗೆ ಬಂದಿದ್ದರು, ಮಾತನಾಡಿದ್ದೀನಿ ಎಂದರು. ನಾನು ಬಡವರ ಪರ ಇರೋದಕ್ಕೆ ಬಿಜೆಪಿ ಅವರಿಗೆ ಭಯ. ಎಲ್ಲಾ ಗ್ಯಾರಂಟಿಗಳನ್ನು ಜಾರಿ ಮಾಡಿದ್ದೀನಿ ಅದಕ್ಕೆ ಅವರಿಗೆ ಭಯ. ಸಿದ್ದರಾಮಯ್ಯನ ರಾಜಕೀಯವಾಗಿ ಮುಗಿಸಿದ್ರೆ, ಕಾಂಗ್ರೆಸ್ಸನ್ನೆ ಮುಗಿಸಿದ್ವಿ ಅನ್ನೋ ಭ್ರಮೆಯಲ್ಲಿದ್ದಾರೆ. ಅವರ ಭ್ರಮೆ ಈಡೇರಲ್ಲ ಎಂದರು.

Donate Janashakthi Media

Leave a Reply

Your email address will not be published. Required fields are marked *