ನವದೆಹಲಿ :ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೆ, ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜಿನಾಮೆ ನೀಡಿದ್ದಾರೆ. ಅವರ ರಾಜಿನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.
ಮುಂದಿನ ವಾರ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಗೋಯಲ್ ಅವರ ರಾಜೀನಾಮೆಯಿಂದ ಚುನಾವಣಾ ದಿನಾಂಕ ಘೋಷಣೆ ಮತ್ತಷ್ಟು ಮುಂದೆ ಹೋಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.
ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್ ಅವರ ರಾಜೀನಾಮೆಯಿಂದಾಗಿ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ.
ಅರುಣ್ ಗೋಯಲ್ ಅವರು ಪಂಜಾಬ್ ಕೇಡರ್ನಲ್ಲಿ 1985ರ ಬ್ಯಾಚ್ನ ಐಎಎಸ್ ಅಧಿಕಾರಿ ಆಗಿದ್ದರು. ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದರು