ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯಲ್ ರಾಜಿನಾಮೆ

ನವದೆಹಲಿ :ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಲ್ಲೆ, ಕೇಂದ್ರ ಚುನಾವಣಾ ಆಯುಕ್ತ ಅರುಣ್ ಗೋಯೆಲ್ ರಾಜಿನಾಮೆ ನೀಡಿದ್ದಾರೆ. ಅವರ ರಾಜಿನಾಮೆಯನ್ನು ರಾಷ್ಟ್ರಪತಿಗಳು ಅಂಗೀಕರಿಸಿದ್ದಾರೆ.

ಮುಂದಿನ ವಾರ ಲೋಕಸಭಾ ಚುನಾವಣೆ ದಿನಾಂಕವನ್ನು ಘೋಷಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಆದರೆ ಗೋಯಲ್​ ಅವರ ರಾಜೀನಾಮೆಯಿಂದ ಚುನಾವಣಾ ದಿನಾಂಕ ಘೋಷಣೆ ಮತ್ತಷ್ಟು ಮುಂದೆ ಹೋಗಬಹುದು ಎಂದು ವಿಶ್ಲೇಷಿಸಲಾಗುತ್ತದೆ.

ಅರುಣ್ ಗೋಯಲ್ ಅಧಿಕಾರಾವಧಿ 2027ರವರೆಗೆ ಇತ್ತು. ಗೋಯಲ್​ ಅವರ ರಾಜೀನಾಮೆಯಿಂದಾಗಿ ಚುನಾವಣಾ ಸಮಿತಿಯಲ್ಲಿ ಎರಡು ಚುನಾವಣಾ ಆಯುಕ್ತ ಸ್ಥಾನಗಳು ಖಾಲಿಯಾಗಿವೆ.

ಅರುಣ್ ಗೋಯಲ್​ ಅವರು ಪಂಜಾಬ್ ಕೇಡರ್‌ನಲ್ಲಿ 1985ರ ಬ್ಯಾಚ್​ನ ಐಎಎಸ್ ಅಧಿಕಾರಿ ಆಗಿದ್ದರು. ನವೆಂಬರ್ 18, 2022 ರಂದು ಸ್ವಯಂ ನಿವೃತ್ತಿ ಪಡೆದರು

Donate Janashakthi Media

Leave a Reply

Your email address will not be published. Required fields are marked *