ಕೊರೊನಾ ನಿರ್ವಹಣೆ ವೈಫಲ್ಯ: ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಧರಣಿ ಆರಂಭಿಸಿದ ಕಾಂಗ್ರೆಸ್‌

ಬೆಂಗಳೂರು: ಕೊರೊನಾ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಾ ಬಂದಿದ್ದ ರಾಜ್ಯ ಕಾಂಗ್ರೆಸ್‌ ನಾಯಕರು ಇದೀಗ ಒಂದು ಹೆಜ್ಜೆ ಮುಂದೆ ಹೋಗಿ ಧರಣಿ ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ವಿಕಾಸಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಬುಧವಾರ ಪ್ರತಿಭಟನೆ ಆರಂಭಿಸಿದ್ದಾರೆ.

ಕೊರೋನಾ ಸೋಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸುವಲ್ಲಿ ನಿರ್ಲಕ್ಷ್ಯ ವಹಿಸಿರುವ, ಬಡವರಿಗಾಗಿ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಂಗ್ರೆಸ್‌ ಧರಣಿ ಆರಂಭಿಸಿದೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭವಾಗಿದೆ. ಶಾಸಕರಾದ ಜಿ. ಪರಮೇಶ್ವರ, ರಾಮಲಿಂಗಾರೆಡ್ಡಿ, ಕೆ.ಜೆ. ಜಾರ್ಜ್, ರಮೇಶ್ ಕುಮಾರ್, ಕೃಷ್ಣಬೈರೇಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ,ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್ ಮತ್ತಿತರರು ಇದ್ದಾರೆ.

Donate Janashakthi Media

Leave a Reply

Your email address will not be published. Required fields are marked *