ಬೆಂಗಳೂರು : ಕೋವಿಡ್ ಪ್ರಕರಣಗಳು ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ಪುನಾರಂಭಿಸುವ ಕುರಿತು ಚಿಂತನೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆಯನ್ನು ನೀಡಿದೆ.
ರಾಜ್ಯದಲ್ಲಿ 2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭಿಸಲಾಗುತ್ತದೆ. 15 ದಿನಗಳ ಕಾಲ ಪರಿಸ್ಥಿತಿಯನ್ನು ಅವಲೋಕಿಸಿ ಉಳಿದ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದರು.
ಈ ಕುರಿತಾಗಿ ಅರ್ಜಿ ಸಲ್ಲಿಸಿದ್ದ ವಕೀಲ ಎ.ಎ. ಸಂಜೀವ್ ನರೇನ್ ಹಾಗೂ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ನಡೆಸಿದ್ದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ನೇತೃತ್ವದ ವಿಭಾಗೀಯ ಪೀಠವು ರಾಜ್ಯದಲ್ಲಿ ಹಂತ ಹಂತವಾಗಿ ಶಾಲೆಗಳನ್ನು ಪುನರಾರಂಭಿಸಲು ಸಾಧ್ಯವೇ ಎಂಬುದರ ಕುರಿತು ಸರ್ಕಾರ ಸ್ಪಷ್ಟಪಡಿಸುವಂತೆ ನಿರ್ದೇಶನ ನೀಡಿದೆ.