ಕೋಸ್ಟ್ ಗಾರ್ಡ್ ಮಹಾ ನಿರ್ದೇಶಕ ರಾಕೇಶ್ ಪಾಲ್ ಹೃದಯಾಘಾತದಿಂದ ಸಾವು!

ಭಾರತೀಯ ಕೋಸ್ಟ್ ಗಾರ್ಡ್ ಮುಖ್ಯಸ್ಥ ರಾಕೇಶ್ ಪಾಲ್ ಹೃದಯಾಘಾತದಿಂದ ಚೆನ್ನೈನಲ್ಲಿ ಅಸುನೀಗಿದ್ದಾರೆ.

ಭಾರತೀಯ ಕೋಸ್ಟ್ ಗಾರ್ಡ್ ನ ಐಜಿ ಆಗಿದ್ದ ರಾಕೇಶ್ ಪಾಲ್ ಭಾನುವಾರ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಬೇಕಿತ್ತು. ಆದರೆ ಹೃದಯಾಘಾತಕ್ಕೆ ಒಳಗಾಗಿದ್ದರಿಂದ ಕೂಡಲೇ ಅವರನ್ನು ಚೆನ್ನೈನ ಖಾಸಗಿ  ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಂಜೆ ನಿಧನರಾದರು.

ರಾಕೇಶ್ ಪಾಲ್ ನಿಧನಕ್ಕೆ ಸಚಿವ ರಾಜನಾಥ್ ಸಿಂಗ್ ಸಂತಾಪ ಸೂಚಿಸಿದ್ದು, ಕರ್ತವ್ಯದ ಬದ್ಧತೆ ಹೊಂದಿದ್ದ ರಾಕೇಶ್ ಪಾಲ್ ಅವರ ನಿಧನ ಆಘಾತ ನೀಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಭಗವಂತ ಕರುಣಿಸಲಿ ಎಂದು ಸಂತಾಪ ಸೂಚಿಸಿದ್ದಾರೆ.

ರಾಕೇಶ್ ಪಾಲ್ ಕಳೆದ ವರ್ಷ ಜುಲೈ 19ರಂದು ಭಾರತೀಯ ಕೋಸ್ಟ್ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ್ದರು. 34 ವರ್ಷಗಳಿಂದ ಕೋಸ್ಟ್ ಗಾರ್ಡ್ ಅಧಿಕಾರಿಯಾಗಿ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದ ರಾಕೇಶ್ ಪಾಲ್, ದೆಹಲಿಯ ಮುಖ್ಯ ಕಚೇರಿಯಲ್ಲಿ ಹೆಚ್ಚುವರಿ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು.

Donate Janashakthi Media

Leave a Reply

Your email address will not be published. Required fields are marked *