ಚಂಡೀಗಢ | ಪಂಜಾಬ್ ಸಿಎಂ ಭಗವಂತ್ ಸಿಂಗ್ ಶುಕ್ರವಾರ ಸಂಜೆ ಖಾಸಗಿ ಆಸ್ಪತ್ರೆಗೆ ದಾಖಲು

ಚಂಡೀಗಢ: ಪಂಜಾಬ್ ಸಿಎಂ ಭಗವಂತ್ ಸಿಂಗ್ ಮಾನ್ ಶುಕ್ರವಾರ ಸಂಜೆ ಆರೋಗ್ಯ ಸುಧಾರಿಸದ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸಂಜೆಯಾದರೂ ಅವರ ಸ್ಥಿತಿ ಸುಧಾರಿಸದ ಕಾರಣ ಅವರನ್ನು ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತು.  51 ವರ್ಷದ ಮಾನ್ ಅವರು ಕಳೆದ ಎರಡು ದಿನಗಳಿಂದ ವೈರಲ್ ಜ್ವರ ಮತ್ತು ಜೀರ್ಣಕ್ರಿಯೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಬಳಲುತ್ತಿದ್ದರು.  ಆಸ್ಪತ್ರೆಯಲ್ಲಿ ವೈದ್ಯರ ತಂಡ ಅವರನ್ನು ಪರೀಕ್ಷಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಗುಂಡ್ಲುಪೇಟೆಯಲ್ಲಿಯೂ ಓಣಂ ಹಬ್ಬದ ಸಂಭ್ರಮ ಹೂವಿನ ವ್ಯಾಪಾರ ಭರ್ಜರಿಯಾಗಿದೆ ರೈತರು ಸಂತಸ

ಅವರ ಅನಾರೋಗ್ಯದ ಸುದ್ದಿ ಬಂದ ನಂತರ, ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಗುರುವಾರ ಮಾನ್ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದರು.

ಪ್ರವಾಹ ಪರಿಸ್ಥಿತಿಯನ್ನು ನಿರ್ಣಯಿಸಲು ಕೇಜ್ರಿವಾಲ್ ಬುಧವಾರ ಸಂಜೆ ಪಂಜಾಬ್‌ಗೆ ಆಗಮಿಸಿದ್ದರು. ಮುಖ್ಯಮಂತ್ರಿಯೊಂದಿಗೆ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕಿತ್ತು. ಆದರೆ, ಮಾನ್ ಅವರಿಗೆ ಆರೋಗ್ಯ ಸರಿ ಇಲ್ಲದ ಕಾರಣ ಕೇಜ್ರಿವಾಲ್ ಒಬ್ಬರೇ ಭೇಟಿ ಕೈಗೊಂಡಿದ್ದರು.

ಕಳೆದ ವರ್ಷವೂ ಇದೇ ಸಮಯದಲ್ಲಿ ಸೋಂಕಿನ ಸಮಸ್ಯೆಗೆ ತುತ್ತಾಗಿದ್ದ ಮಾನ್, ಮೊಹಾಲಿಯ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿ ಕೆಲ ದಿನಗಳು ಚಿಕಿತ್ಸೆ ಪಡೆದಿದ್ದರು.

ಪಂಜಾಬ್‌ನಲ್ಲಿ ತೀವ್ರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಈವರೆಗೆ 43 ಮಂದಿ ಮೃತಪಟ್ಟಿದ್ದಾರೆ.

ಇದನ್ನೂ ನೋಡಿ: ನಿನ್ನ ಹೆರಿಗೆಗೆ ಆಸ್ಪತ್ರೆ ಮಾಡಿಸೋಣ …. ಏನ್ರೀ ದೇಶಪಾಂಡೆ ಇದು? ಅವಹೇಳನಕಾರಿ ಹೇಳಿಕೆಗೆ ಆಕ್ರೋಶJanashakthi Media

Donate Janashakthi Media

Leave a Reply

Your email address will not be published. Required fields are marked *