ಚಿಕ್ಕಬಳ್ಳಾಪುರ: ಸುಮಾರು 60ಕ್ಕಿಂತ ಹೆಚ್ಚು ಕುರಿಗಳು ಚಿಂತಾಮಣಿ ತಾಲೂಕಿನ ಕಸಬಾ ಹೋಬಳಿಯ ಕಾಚಹಳ್ಳಿಯಲ್ಲಿ ಶುಕ್ರವಾರ ಸಂಜೆ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ : ಬೆಂಗಳೂರು | ಲಾಲ್ ಬಾಗ್, ಕಬ್ಬನ್ ಪಾರ್ಕ್ ರೀತಿ ಬಸವಣ್ಣ ಜೀವವೈವಿಧ್ಯ ಉದ್ಯಾನಕ್ಕೆ ಸಚಿವ ಸಂಪುಟ ಅನುಮೋದನೆ – ಈಶ್ವರ್ ಖಂಡ್ರೆ
ಸಾಯಂಕಾಲ ಮನೆಗೆ ಬರುತ್ತಲೇ ಒಂದೊಂದಾಗಿ ಸುಮಾರು 50 ಕುರಿಗಳು ಸತ್ತಿವೆ. ಕೂಡಲೇ ಪಶುವೈದ್ಯಕೀಯ ಇಲಾಖೆಯ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಸಾವಿಗೆ ಕಾರಣ ಗೊತ್ತಾಗಿಲ್ಲ. ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ವೈದ್ಯರು ಸ್ಥಳಕ್ಕೆ ತೆರಳಿ ಎಲ್ಲಾ ಕುರಿಗಳಿಗೆ ಚಿಕಿತ್ಸೆ ನೀಡಿದ್ದಾರೆ. ಗ್ರಾಮದ ಜಾಫರ್ ಖಾನ್, ಖುರ್ಷಿದ್ ಮತ್ತು ಮಾಲಿಕ್ ಮೂರು ಜನರು ಸುಮಾರು 200 ಕುರಿಗಳನ್ನು ಬೆಳಗ್ಗಿನಿಂದ ಸಂಜೆಯವರೆಗೆ ಹೊರಗಡೆ ಮೇಯಿಸಿಕೊಂಡು ಬಂದಿದ್ದಾರೆ.
ವೈದ್ಯರು ಸ್ಥಳಕ್ಕೆ ಬಂದು ಉಳಿದ ಎಲ್ಲಾ ಕುರಿಗಳಿಗೆ ಚುಚ್ಚುಮದ್ದು ನೀಡಿದ್ದಾರೆ. ಸಾವಿಗೆ ಕಾರಣ ಗೊತ್ತಾಗಿಲ್ಲ. ಯಾವುದಾದರೂ ರಾಸಾಯನಿಕವನ್ನು ಸಿಂಪಡಿಸಿದ್ದ ಹುಲ್ಲನ್ನು ತಿಂದಿರಬಹುದು ಅಥವಾ ನೀರನ್ನು ಕುಡಿದಿರಬಹುದು ಎಂಬ ಅನುಮಾನವಿದೆ ಎಂದು ಮಾಲೀಕ ಜಾಫರ್ ಖಾನ್ ತಿಳಿಸಿದರು.
