- ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ
- ನಾರಾ ಪ್ರಿಫೆಕ್ಚರ್‌ನಲ್ಲಿ ಭಾಷಣ ಮಾಡುವಾಗ ಗುಂಡಿನ ದಾಳಿ
- ಗಂಭೀರವಾಗಿ ಗಾಯಗೊಂಡಿದ್ದ ಶಿಂಜೋ ಅಬೆ
ನಾರಾ : ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರಿಗೆ ಗುಂಡು ತಗುಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಜಪಾನ್ನಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿದ್ದ ಶಿಂಜೋ ಅವರು ಭಾಷಣ ಮಾಡುತ್ತಿರುವಾಗಲೇ ಅವರ ಮೇಲೆ ಗುಂಡು ಹಾರಿಸಲಾಗಿತ್ತು. ಮಾಜಿ ಪ್ರಧಾನಿ ಗುಂಡು ತಗುಲಿ ನೆಲಕ್ಕೆ ಕುಸಿಯುತ್ತಿರುವ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿದ್ದವು.
ಶುಕ್ರವಾರ ಬೆಳಗ್ಗೆ ಘಟನೆ ನಡೆದಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಂಜೋ ಅವರು ಭಾರತದ ಜೊತೆ ಉತ್ತಮ ಒಡನಾಟವನ್ನು ಇಟ್ಟುಕೊಂಡಿದ್ದರು.ಚುನಾವಣೆಯ ಪ್ರಚಾರದ ವೇಳೆ ಜಪಾನ್‌ನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರಿಗೆ ಗುಂಡು ಹಾರಿಸಲಾಗಿರುವ ಸುದ್ದಿ ಇಂದು ಬೆಳಗ್ಗೆ ಕೇಳಿಬಂದಿತ್ತು. ಶುಕ್ರವಾರ ನಾರಾದಲ್ಲಿ ಮಾಜಿ ಪ್ರಧಾನಿಗೆ ಗುಂಡು ಹಾರಿಸಿದ್ದಾರೆ ಎಂದು ಸರ್ಕಾರದ ವಕ್ತಾರರನ್ನು ಉಲ್ಲೇಖಿಸಿ ರಾಯಿಟರ್ಸ್ ವರದಿ ತಿಳಿಸಿದೆ.
ಅಬೆ ಜಪಾನ್‌ನ ದೀರ್ಘಾವಧಿಯ ಪ್ರಧಾನ ಮಂತ್ರಿಯಾಗಿದ್ದರು. ಅವರು 2006 ರಲ್ಲಿ ಒಂದು ವರ್ಷ ಮತ್ತು ಮತ್ತೆ 2012 ರಿಂದ 2020 ರವರೆಗೆ ಅಧಿಕಾರದಲ್ಲಿದ್ದರು.