ಟೆಂಪೊಗೆ ಡಿಕ್ಕಿ ಹೊಡೆದ ಬಸ್: 10 ಪ್ರಯಾಣಿಕರ ಸಾವು

Please follow and like us:

ಖಾಸಗಿ ಬಸ್ ಟೆಂಪೊಗೆ ಡಿಕ್ಕಿ ಹೊಡೆದಿದ್ದರಿಂದ 10 ಮಂದಿ ಪ್ರಯಾಣಿಕರು ಮೃತಪಟ್ಟು, 20 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ.

ಭಾನುವಾರ ಬೆಳಿಗ್ಗೆ ಬುಲಂದ್‌ಶಹರ್‌ ಸೇಲಂಪುರ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಓವರ್ ಟೇಕ್ ಮಾಡುವ ಆತುರದಲ್ಲಿ ಖಾಸಗಿ ಬಸ್ ಮತ್ತೊಂದು ಬಸ್ ಓವರ್ ಟೇಕ್ ಮಾಡುವಾಗ ಎದುರುಗಡೆಯಿಂದ ಬರುತ್ತಿದ್ದ ಟೆಂಪೊಗೆ ಡಿಕ್ಕಿ ಹೊಡೆದಿದೆ.

ಟೆಂಪೋದಲ್ಲಿ 25 ಜನರು ಪ್ರಯಾಣಿಸುತ್ತಿದ್ದು, ಮೃತಪಟ್ಟವರಲ್ಲಿ ಬಹುತೇಕ ಮಂದಿ ಟೆಂಪೊದಲ್ಲಿ ಪ್ರಯಾಣಿಸುತ್ತಿದ್ದವರು ಎಂದು ಹೇಳಲಾಗಿದೆ.

ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಅಪಘಾತದಲ್ಲಿ ಟೆಂಪೋ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ನ ಮುಂಭಾಗವೂ ಜಖಂಗೊಂಡಿದೆ.

ಘಟನೆ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದ್ದು, ರಸ್ತೆ ತಡೆ ನಡೆಸಿದರು. ಅಪಘಾತಕ್ಕೆ ಕಾರಣ ಪೊಲೀಸರಿಂದ ಇನ್ನಷ್ಟೇ ತಿಳಿದು ಬರಬೇಕಿದೆ. ತನಿಖೆ ಪ್ರಾರಂಭಿಸಲಾಗಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *