ಕನ್ನಡ ಬೆಳ್ಳಿತೆರೆಯಲ್ಲಿ ರಿಯಲ್ ಸ್ಮಾರ್ ಎಂದು ಹೆಸರಾಗಿರುವ ನಟ ಉಪೇಂದ್ರ ಬಹು ಸಮಯದ ನಂತರ ನಿರ್ದೇಶಿಸಿರುವಂತಹ ಬಹುನಿರೀಕ್ಷಿತ ‘UI’ ಚಿತ್ರ ಇದೇ ಡಿಸೆಂಬರ್ 20ರಂದು ಜಾಗತಿಕವಾಗಿ ತೆರೆ ಕಾಣಲು ದಿನಗಣನೆ ಎದುರುನೋಡುತ್ತಿದ್ದು, ಚಿತ್ರವು ವಿಶ್ವಾದ್ಯಂತ 2000ಕ್ಕೂ ಅಧಿಕ ಸ್ಕಿನ್‌ಗಳಲ್ಲಿ ಬಿಡುಗಡೆಯಾಗಲಿದೆ ಎಂಬ ಮಾಹಿತಿ ಹೊರಬಿದ್ದಿದೆ.
ಒಂಭತ್ತು ವರ್ಷಗಳ ನಂತರ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ‘UI’ ಚಿತ್ರ ಡಿಸೆಂಬರ್ 20ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ವಿಶ್ವದಾದ್ಯಂತ 2000ಕ್ಕೂ ಅಧಿಕ ಸ್ಮಿನ್‌ಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ.
ಇದನ್ನೂ ಓದಿ : ಬಾಲ್ಯವಿವಾಹ: ರಾಜ್ಯದಲ್ಲಿ ಕಳೆದ 3 ವರ್ಷದಲ್ಲಿ 1,465 ಪ್ರಕರಣಗಳು ಬಯಲು
ಪೋಸ್ಮರ್, ಹಾಡು, ಟೀಸರ್ ಹಾಗೂ ವಾರ್ನರ್ ಮೂಲಕ ಈಗಾಗಲೇ ಸಿನಿಪ್ರಿಯರಲ್ಲಿ ಭಾರೀ ಕುತೂಹಲ ಮೂಡಿಸಿರುವ ಈ ಚಿತ್ರವನ್ನು ವೀಕ್ಷಿಸಲು ಉಪೇಂದ್ರ ಅವರ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.
ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ನವೀನ್ ಮನೋಹರ್ ಅವರ ಸಹ ನಿರ್ಮಾಣ ಹಾಗೂ ತುಳಸಿರಾಮ ನಾಯ್ಡು (ಲಹರಿ ವೇಲು), ಜಿ.ರಮೇಶ್, ಜಿ.ಆನಂದ್, ಚಂದ್ರು ಮನೋಹರನ್ ಹಾಗೂ ನಾಗೇಂದ್ರ ಅವರು ಕಾರ್ಯಕಾರಿ ನಿರ್ಮಾಪಕರಾಗಿದ್ದಾರೆ.
ಈ ಚಿತ್ರದಲ್ಲಿ ಉಪೇಂದ್ರ ಅವರಿಗೆ ಜೋಡಿಯಾಗ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಹೆಸರಾಂತ ಕೆ.ವಿ.ಎನ್ ಪ್ರೊಡಕ್ಷನ್ಸ್ ಸಂಸ್ಥೆ ಈ ಚಿತ್ರವನ್ನು ವಿತರಣೆ ಮಾಡುತ್ತಿದೆ.
ಇದನ್ಣೂ ನೋಡಿ : ಪಿಚ್ಚರ್ ಪಯಣ :153, ಚಿತ್ರ : ಆಲ್ ವಿ ಇಮ್ಯಾಜಿನ್ ಆಸ್ ಲೈಟ್ , ALL WE IMAGINE AS LIGHT