ನಿವೃತ್ತಿ ನ್ಯಾಯಮೂರ್ತಿ ನಾಗಮೋಹನ ದಾಸ್ ರವರ ಸಮಿತಿ ನೀಡಿರುವ ವರದಿಯ ಪರಾಮರ್ಶೆ
ಬೆಂಗಳೂರು : ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ನೀಡಿರುವ ಮೀಸಲಾತಿ ಹೆಚ್ಚಳ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಪರಮಾರ್ಶೆ ನಡೆಸಲು ಮುಖ್ಯಮಂತ್ರಿ ಯಡಿಯೂರಪ್ಪನವರು ರಚಿಸಿದ ಸಚಿವ ಸಂಪುಟದ ಮೊದಲ ಸಭೆ ಡಿ.21 ರಂದು ವಿಧಾನಸೌಧ ಕ್ಯಾಬಿನೆಟ್ ನಲ್ಲಿ ಬೆಳಗ್ಗೆ 11 ಗಂಟೆಗೆ ಸಚಿವ ಶ್ರೀರಾಮುಲು ಅವರ ಅಧ್ಯೆಕ್ಷತೆಯಲ್ಲಿ ನಡೆಯಲಿದೆ.
ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಮತ್ತು ಪರಿಶಿಷ್ಟ ಪಂಗಡ ಈ ಎರಡು ಸಮುದಾಯದಲ್ಲಿ ಜನಸಂಖ್ಯೆ ಪ್ರಮಾಣ ಹೆಚ್ಚಳವಾಗಿದ್ದು ಅದಕ್ಕೆ ಅನುಗುಣವಾಗಿ ಪರಿಶಿಷ್ಟ ಜಾತಿ ಮೀಸಲಾತಿ ಕೋಟಾ ಪ್ರಮಾಣ ಶೇ.15 ಇದ್ದು ಅದನ್ನು ಶೇ.17ಕ್ಕೆ ಹೆಚ್ಚಿಸಲು, ಅದೇ ರೀತಿ ಪರಿಶಿಷ್ಟ ಪಂಗಡಕ್ಕೆ ಶೇ.3 ರಷ್ಟಿದ್ದ ಮೀಸಲಾತಿಯನ್ನು ಶೇ.7ಕ್ಕೆ ಹೆಚ್ಚಳ ಮಾಡುವ ಕುರಿತು ಕಳೆದ ಸಚಿವ ಸಂಪುಟ ಉಪ ಸಮಿತಿ ರಚಿಸಿ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.
ದಶಕಗಳ ಹಿಂದೆ ಈ ಎರಡು ಸಮುದಾಯಗಳ ಮೀಸಲಾಯಿಉನ್ನು ನಿಗದಿ ಮಾಡಲಾಗಿತ್ತು. ಈ ಎರಡು ವರ್ಗದಲ್ಲಿ ಗಣನೀಯ ಪ್ರಮಾಣದಲ್ಲಿ ಜನಸಂಖ್ಯೆ ಹೆಚ್ಚಳವಾಗಿದ್ದು, ಅದಕ್ಕೆ ಅನುಗುಣವಾಗಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಿಲ್ಲ. ಈ ಕುರಿತಾಗಿ ಸರ್ಕಾರ ರಚಿಸಿರುವ ಸಚಿವ ಸಂಪುಟ ಉಪ ಸಮಿತಿ ಈ ಕುರಿತು ಪರಮಾರ್ಶೆ ನಡೆಸಲಿದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ, ಸರ್ಕಾರ ನಿವೃತ್ತಿ ನ್ಯಾಯಮೂರ್ತಿ ನಾಗಮೋಹನ ದಾಸ್ ಅವರ ನೇತೃತ್ವದಲ್ಲಿ ಆಯೋಗ ರಚಿಸಿತ್ತು. 277 ಪುಟಗಳ ವರದಿಯನ್ನು ರಚಿಸಿ ಸರ್ಕಾರಕ್ಕೆ ನೀಡಿತ್ತು. ವರದಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಮೀಸಲಾತಿ ಹೆಚ್ಚಳ ಮಾಡುವಂತೆ ಆಯೋಗ ಶಿಫಾರಸು ಮಾಡಿದೆ.
ಡಿ.21 ರಂದು ನಡೆಯುವ ಪರಮರ್ಶೆಯಲ್ಲಿ ಕಾನೂನು ಸಚಿವ ಜೆ.ಸಿ ಮಧುಸ್ವಾಮಿ, ಉಪಮುಖ್ಯಮಂತ್ರಿ ಗೋವಿಂದ ಎಂ.ಕಾರಜೋಳ, ಕಂದಾಯ ಸಚಿವ ಆರ್ ಅಶೋಕ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ, ಸರ್ಕಾರ ಅಪರ ಕಾರ್ಯದರ್ಶಿ ಹಾಗೂ ಸಮಾಜ ಕಲ್ಯಾಣ ಅಪರ ಮುಖ್ಯ ಕಾರ್ಯದರ್ಶಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುವ ಮೊದಲ ಸಭೆಯಲ್ಲಿ ಏನೆಲ್ಲಾ ಚರ್ಚೆಗಳು ನಡೆಯುತ್ತವೇ ಎಂಬ ಕುತೂಹಲಗಳು ಹೆಚ್ಚಾಗಿದೆ.