ದಸರಾ ಆಚರಣೆ ಕುರಿತಂತೆ ವಾರದೊಳಗೆ ತೀರ್ಮಾನ: ಎಸ್‌.ಟಿ.ಸೋಮಶೇಖರ್‌

  • ಹೈಪವರ್ ಕಮಿಟಿಯನ್ನು ಮೈಸೂರಿನಲ್ಲಿಯೇ ರಚನೆ ಮಾಡಬೇಕೆಂಬ ಮಾತುಕತೆ

 

ಮೈಸೂರು: ನಾಡಹಬ್ಬ ದಸರೆಗೆ ದಿನಗಣನೆ ಆರಂಭವಾಗಿದ್ದು ಮುಂದಿನ ವಾರದೊಳಗಾಗಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್‌. ಟಿ. ಸೋಮಶೇಖರ್‌ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ದಸರಾಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಅವರ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಇನ್ನು ಹೈಪವರ್ ಕಮಿಟಿಯನ್ನು ಮೈಸೂರಿನಲ್ಲಿಯೇ ರಚನೆ ಮಾಡಬೇಕೆಂಬ ನಿಟ್ಟಿನಲ್ಲಿ ಮಾತುಕತೆ ಸಹ ನಡೆದಿದೆ.

ಈ ಬಾರಿ ಆನೆಗಳ ಸವಾರಿ ಸೇರದಂತೆ ಯಾವ ರೀತಿಯಾಗಿ ಆಚರಣೆ ಮಾಡಬೇಕು ಎಂಬ ನಿಟ್ಟಿನಲ್ಲಿ ಹೈಪವರ್ ಕಮಿಟಿಯಲ್ಲಿ ಚರ್ಚಿಸಿ ಇನ್ನು ವಾರದೊಳಗೆ ತೀರ್ಮಾನವಾಗಲಿದೆ ಎಂದರು.

ಮೈಸೂರು ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿಲ್ಲ :

ಡಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿಲ್ಲ. ಅಭಿರಾಮ್ ಅವರೇ ತಾವು 2 ವರ್ಷ ತರಬೇತಿಗಾಗಿ ತೆರಳಲು ಮುಖ್ಯಮಂತ್ರಿಗಳಿಂದ ಅನುಮತಿ ಪಡೆದುಕೊಂಡಿದ್ದಾರೆ.

ಅವರು ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, 15 ದಿನಗಳ ಹಿಂದೆಯೇ ಮುಖ್ಯಮಂತ್ರಿಗಳ ಬಳಿ ಹೆಚ್ಚಿನ ತರಬೇತಿಗಾಗಿ ತೆರಳಬೇಕಾಗಿ ಕೋರಿಕೊಂಡಿದ್ದರು. ತಮಗೆ ತರಬೇತಿಯಿಂದ ವೃತ್ತಿ ಜೀವನದಲ್ಲಿ ಅನುಕೂಲವಾಗುತ್ತದೆ ಎಂದು ನನ್ನ ಬಳಿಯೂ ಕೇಳಿಕೊಂಡಿದ್ದರು ಎಂದರು.

ಈ ನಡುವೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಮತ್ತು ಸಾವಿನ ಸಂಖ್ಯೆಹೆಚ್ಚಾಗುತ್ತಿದ್ದು, ಈ ಬಗ್ಗೆ ಇಂದು ಅಧಿಕಾರಿಗಳ ಸಭೆ ಮಾಡುತ್ತೇನೆ. ಪಾಸಿಟಿವ್ ಹೆಚ್ಚಾಗುತ್ತಿರುವುದಕ್ಕೆ ಕಾರಣ ತಿಳಿದು ಬಂದಿಲ್ಲ. ಸಭೆಯಲ್ಲಿ ಈ ಬಗ್ಗೆ ಚರ್ಚೆ ಮಾಡುತ್ತೇನೆ. ವೈದ್ಯಾಧಿಕಾರಿಗಳು ಹಾಗೂ ಅಧಿಕಾರಿಗಳ ನಡುವೆ ವೈಮನಸ್ಸು ಇತ್ತು. ಈಗ ಅದನ್ನು ಬಗೆಹರಿಸಿದ್ದೇನೆ ಎಂದರು.

Donate Janashakthi Media

Leave a Reply

Your email address will not be published. Required fields are marked *