ನವದೆಹಲಿ | ಎಸ್‌ಐಆರ್ 2ನೇ ಹಂತದ ಪ್ರಕ್ರಿಯೆ: ಆಕ್ಷೇಷಣಾ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

Please follow and like us:
ನವದೆಹಲಿ: 2ನೇ ಹಂತದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಪಶ್ಚಿಮ ಬಂಗಾಳ ಸೇರಿದಂತೆ ಐದು ರಾಜ್ಯ ಹಾಗೂ ಕೇಂದ್ರಾಳಿತ ಪ್ರದೇಶಗಳಲ್ಲಿ ನಡೆಯುತ್ತಿರುವ ಕರಡು ಪಟ್ಟಿಯ ಆಕ್ಷೇಷಣೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಚುನಾವಣಾ ಆಯೋಗ (ಇ.ಸಿ) ವಿಸ್ತರಿಸಿದೆ.

ಇದನ್ನೂ ಓದಿ : ಬೆಂಗಳೂರು | ತಕ್ಷಣ ಪುನರ್ವಸತಿ ಕಲ್ಪಿಸಿ : ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ – ಬಿ.ಟಿ. ಲಲಿತಾ ನಾಯಕ್

ಗೋವಾ, ಲಕ್ಷದ್ವೀಪ, ರಾಜಸ್ಥಾನ, ಪುದುಚೇರಿ ಮತ್ತು ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್‌ ಕರಡು ಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳ ಅರ್ಜಿ ಸಲ್ಲಿಸುವ ಅವಧಿ ಗುರುವಾರ (ನಿನ್ನೆ) ಕೊನೆಗೊಳ್ಳಬೇಕಿತ್ತು, ಆದರೆ ಇದೀಗ ಈ ಅವಧಿಯನ್ನು ಜನವರಿ 19ರವರೆಗೆ ವಿಸ್ತರಿಸಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ಅಥವಾ ಅಳಸಿ ಹಾಕಲು ಆಕ್ಷೇಷಣೆ ಅರ್ಜಿ ಸಲ್ಲಿಸಲು ಚುನಾವಣಾ ಆಯೋಗ ಸಮಯಾವಕಾಶ ನೀಡಿತ್ತು. ಐದು ರಾಜ್ಯ ಹಾಗೂ ಒಂದು ಕೇಂದ್ರಾಡಳಿತ ಪ್ರದೇಶಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಡಿಸೆಂಬರ್ 16ರಂದು ಕರಡು ಪಟ್ಟಿಯನ್ನು ಪ್ರಕಟಿಸಿತ್ತು.

ಅವಧಿ ವಿಸ್ತರಣೆ ಸಂಬಂಧ ಚುನಾವಣಾ ಆಯೋಗವು ರಾಜ್ಯಗಳ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದೆ.

Please follow and like us:
Donate Janashakthi Media

Leave a Reply

Your email address will not be published. Required fields are marked *