ನಾಳೆಯಿಂದ ಜಂಟಿ ವಿಧಾನಮಂಡಲ ಅಧಿವೇಶನ  

ಬೆಂಗಳೂರು; ಜ.27 : ನಾಳೆಯಿಂದ ಫೆ.5 ರ ವರೆಗೆ  ಏಳು ದಿನಗಳ ಕಾಲ ರಾಜ್ಯ ವಿಧಾನಮಂಡಲ ಉಭಯ ಸದನಗಳ ಅಧಿವೇಶನ ಶುರುವಾಗಲಿದೆ. ಈ ವರ್ಷದ ಮೊದಲನೆಯ ವಿಧಾನ ಮಂಡಲ ಅಧಿವೇಶನ ಇದಾಗಿದ್ದು, ಈ ಬಾರಿಯ ವಿಧಾನ ಮಂಡಲ ಅಧಿವೇಶನದಲ್ಲಿ ಪ್ರಮುಖ ಹನ್ನೊಂದು ವಿಧೇಯಕಗಳು ಮಂಡನೆಯಾಗಲಿದೆ ಎಂದು ವಿಧಾನ ಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.

ವಿಧಾನ ಸಭೆಯಲ್ಲಿ ನಾಳೆ ಬೆಳಗ್ಗೆ 11 ಗಂಟೆಗೆ ಶುರುವಾಗಲಿರುವ ಈ ಅಧಿವೇಶನದಲ್ಲಿ ರಾಜ್ಯಪಾಲರಾದ ವಜುಬಾಯಿ ವಾಲಾ ಸದನದ ಉಭಯ ಸದಸ್ಯರನ್ನು  ಉದ್ದೇಶಿಸಿ ಮಾತನಾಡಲಿದ್ದಾರೆ.

ಅಧಿವೇಶನದಲ್ಲಿ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ ಸಮರಕ್ಕೆ ಈ ಅಧಿವೇಶನ ವೇದಿಕೆಯಾಗಿ ಸಜ್ಜಾಗಿದ್ದು, ಪೆಟ್ರೋಲ್, ಡಿಸೇಲ್, ತೈಲ ಅನಿಲಗಳ ಹೆಚ್ಚಳ ಮತ್ತು ಅಗತ್ಯ ವಸ್ತುಗಳ ಹೆಚ್ಚಳ ಕುರಿತು ಚರ್ಚೆಗಳು ನಡೆಯಲಿದೆ ಎಂದು ಕೇಳಿಬರುತ್ತಿದೆ. ಪ್ರಮುಖವಾಗಿ ಕೃಷಿ ಮಸೂದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಕುರಿತು ಸದಸನದಲ್ಲಿ ಚರ್ಚೆಯಾಗಲಿವೆ ಎಂದು ಹೇಳಲಾಗುತ್ತಿದೆ.

ಸರ್ಕಾರವನ್ನು ಇಕ್ಕಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿದ್ದು, ಸಿಡಿ ವಿಚಾರ ಸ್ಪೋಟ ಗೊಳ್ಳುವ ಸಾಧ್ಯತೆ ಇದೆ. ಸಚಿವ ಸಂಪುಟ ವಿಸ್ತರಣೆ, ಖಾತೆ ಕ್ಯಾತೆ ಬಿಕ್ಕಟ್ಟಿನಲ್ಲಿ ಪ್ರತಿಪಕ್ಷಗಳು ಒಡ್ಡುವ ಅಸ್ತ್ರಗಳನ್ನ ನೂತನ ಸಚಿವರು ಎದುರಿಸಬೇಕಾಗಿ ಬರಬಹುದು ಎಂದು ಹೇಳಲಾಗುತ್ತಿದೆ.

Donate Janashakthi Media

Leave a Reply

Your email address will not be published. Required fields are marked *