ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಸರ್ವಪಕ್ಷಗಳ ಸಭೆ ಕರೆದಿದ್ದು, ಬಾಂಗ್ಲಾದೇಶ ಪ್ರಧಾನಿ ಹುದ್ದೆಗೆ ಶೇಖ್ ಹಸೀನಾ ರಾಜೀನಾಮೆಯಿಂದ ಉಂಟಾಗಿರುವ ಬಿಕ್ಕಟ್ಟಿನ ಕುರಿತು ಚರ್ಚೆ ನಡೆಸಲಿದ್ದಾರೆ.
ಕೇಂದ್ರ ವಿದೇಶಾಂಗ ಸಚಿವ ಎಸ್. ಜೈ ಶಂಕರ್ ಸರ್ವಪಕ್ಷಗಳ ಸಭೆಯಲ್ಲಿ ಬಾಂಗ್ಲಾದೇಶದಲ್ಲಿನ ಪರಿಸ್ಥಿತಿ ಕುರಿತು ಸಂಸದರಿಗೆ ಮಾಹಿತಿ ನೀಡಲಿದ್ದಾರೆ.
ಬಾಂಗ್ಲಾದೇಶದ ಆಡಳಿತವನ್ನು ಸೇನೆ ಹಿಡಿತಕ್ಕೆ ತೆಗೆದುಕೊಂಡಿದ್ದು, ಇಂದು ಮಧ್ಯಂತರ ಸರ್ಕಾರ ರಚಿಸುವ ಸಾಧ್ಯತೆ ಇದೆ.
ಸಭೆಯಲ್ಲಿ ಜೈ ಶಂಕರ್ ಅಲ್ಲದೇ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಮುಂತಾದವರು ಪಾಲ್ಗೊಳ್ಳಲಿದ್ದಾರೆ.
ಬಾಂಗ್ಲಾದೇಶ ಪ್ರಧಾನಿ ಸ್ಥಾನಕ್ಕೆ ಶೇಖ್ ಹಸೀನಾ ರಾಜೀನಾಮೆ ನೀಡಿದ ನಂತರ ಭಾರತಕ್ಕೆ ಆಗಮಿಸಿದ್ದು, ರಾಜಾಶ್ರಯ ಕೋರಿ ಬ್ರಿಟನ್ ಗೆ ತೆರಳಲು ಉಂಟಾಗಿರುವ ಅಡ್ಡಿ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವ ಜೈ ಶಂಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.