ಬಾಂಗ್ಲಾದೇಶದಲ್ಲಿ ಹಿಂಸಾಚಾರ ಭುಗಿಲೆದ್ದಿರುವ ಹಿನ್ನೆಲೆಯಲ್ಲಿ ಭಾರತದ ಎಲ್ಲಾ ರೈಲು ಸಂಚಾರವನ್ನು ರದ್ದುಗೊಳಿಸಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.
ಬಾಂಗ್ಲಾದೇಶದಲ್ಲಿ ಹಿಂಸಾಚಾರಕ್ಕೆ 100ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದು, ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ಸಲ್ಲಿಸಿ ಪಲಾಯನ ಮಾಡಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಬಾಂಗ್ಲಾದೇಶ ನಡುವೆ ಸಂಚರಿಸುತ್ತಿದ್ದ ಭಾರತದ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿದೆ.
ಕೋಲ್ಕತಾ-ಢಾಕಾ-ಕೋಲ್ಕತಾ ಮೈತ್ರಿ ಎಕ್ಸ್ ಪ್ರೆಸ್, ಕೋಲ್ಕತಾ-ಖುಲ್ನಾ, ಕೋಲ್ಕತಾ ಬಂಧನ್ ಎಕ್ಸ್ ಪ್ರೆಸ್ ಮತ್ತು ಢಾಕಾ- ನವ ಜಲಪೈಗುರಿ-ಢಾಕಾ ಮೈತ್ರಿ ಎಕ್ಸ್ ಪ್ರೆಸ್ ರೈಲು ಸಂಚಾರವನ್ನು ರದ್ದುಗೊಳಿಸಲಾಗಿದೆ.
73 ವರ್ಷದ ಶೇಖ್ ಹಸೀನಾ 5 ಬಾರಿ ಬಾಂಗ್ಲಾದೇಶದ ಪ್ರಧಾನಿ ಹುದ್ದೆ ಅಲಂಕರಿಸಿದ್ದು ಕಳೆದ ಕೆಲವು ತಿಂಗಳಿಂದ ನಡೆಯುತ್ತಿರುವ ಹಿಂಸಾಚಾರದಲ್ಲಿ 300ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದರು. ಹಿಂಸಾಚಾರ ಹತ್ತಿಕ್ಕಲು ವಿಫಲವಾದ ಹಿನ್ನೆಲೆಯಲ್ಲಿ ಶೇಖ್ ಹಸೀನಾ ಸೋಮವಾರ ಮಧ್ಯಾಹ್ನ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.