ಬೆಂಗಳೂರು : ಬಿಜೆಪಿಯವರು ಇತಿಹಾಸವನ್ನು ತಿರುಚಿವುದರಲ್ಲಿ ನಿಸ್ಸೀಮರು. ನಮಗೆ ಪಟೇಲ್ ರ ಪ್ರತಿಮೆಗೆ ಯಾವ ವಿರೋಧವಿಲ್ಲ. ಆದರೆ ಜವಾಹರ್ ಲಾಲ್ ನೆಹರು ಹಾಗು ಪಟೇಲ್ ಸಂಬಂಧದ ಬಗ್ಗೆ ಬಿಜೆಪಿ ನಾಯಕರು ಇತಿಹಾಸವನ್ನು ತಿರುಚುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಇಂದು ಕೆಪಿಸಿಸಿ ಕಚೇರಿಯಲ್ಲಿ ಉಕ್ಕಿನ ಮನುಷ್ಯ ದಿ.ಸರ್ದಾರ್ ವಲ್ಲಭಭಾಯ್ ಪಟೇಲ್ ಜನ್ಮದಿನ ಹಾಗೂ ಮಾಜಿ ಪ್ರಧಾನಿ ಉಕ್ಕಿನ ಮಹಿಳೆ ದಿ. ಇಂದಿರಾಗಾಂಧಿಯವರ ಪುಣ್ಯ ಸ್ಮರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಕುರಿತು ಮಾತನಾಡಿದ ಸಿದ್ದರಾಮಯ್ಯ, ದೇಶಕ್ಕೆ ಗಾಂಧಿ ಕುಟುಂಬದ ಕೊಡುಗೆ ಅಪಾರವಾದದ್ದು. ಗಾಂಧಿಯವರನ್ನು ಕೊಂದ ಕುಟುಂಬದವರು ಬಿಜೆಪಿ ನಾಯಕರು ನಿಜವಾದ ಇತಿಹಾಸ ಹೇಳುವುದಿಲ್ಲ. ಸುಳ್ಳು ಹೇಳುವುದೇ ಬಿಜೆಪಿ ನಾಯಕರ ಕೆಲಸ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ದೇಶದ ಏಕತೆ ಮತ್ತು ಅಖಂಡತೆಗಾಗಿ ಪ್ರಾಣವನ್ನೇ ಬಲಿದಾನ ಮಾಡಿದ್ದ ಗಾಂಧಿ, ನೆಹರು, ವಲ್ಲಭಭಾಯಿ ಪಟೇಲ್ ಇಂದಿರಾಗಾಂಧಿ ಅವರು ಬದುಕು, ಸಾಧನೆ ಮತ್ತು ತ್ಯಾಗ ನಮಗೆಲ್ಲ ಸ್ಪೂರ್ತಿಯಾಗಲಿ. ಹಿರಿಯ ಚೇತನಕ್ಕೆ ಗೌರವಪೂರ್ವಕ ನಮನಗಳನ್ನು ಸಲ್ಲಿಸಿದರು. ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸಲೀಂ ಅಹಮದ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು.