ಬೆಂಗಳೂರಲ್ಲಿ 6 ರಿಂದ 9ನೇ‌ ತರಗತಿ  ಸಂಪೂರ್ಣ ಸ್ಥಗಿತ : ಸುರೇಶ್‌ ಕುಮಾರ್

ಬೆಂಗಳೂರು : ಬೆಂಗಳೂರು ನಗರದಲ್ಲಿ  ಕೋರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ 6 ರಿಂದ 9 ನೇ ತರಗತಿಗಳು ಭೌತಿಕವಾಗಿ ಸ್ಥಗಿತಗೊಳಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಫ್ರಾಥಮಿಕ ಮತ್ತು ಫ್ರೌಢ ಶಿಕ್ಷಣ ಸಚಿವ ಸುರೇಶ ಕುಮಾರ್‌  ಹೇಳಿದಾರೆ.

ಈ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗಿದ್ದು, ಈ ವಯೋಮಾನದ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ‌ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. 10 ನೇ ತರಗತಿಗಳು ಎಂದಿನಂತೆ ಮುಂದುವರೆಯಲಿದ್ದು, ವಿದ್ಯಾರ್ಥಿಗಳ ಹಾಜರಾತಿ ಕಡ್ಡಾಯವಲ್ಲ ಎಂದು ಅವರು ಮಾಹಿತಿಯನ್ನು ನೀಡಿದ್ದಾರೆ.

ರಾಜ್ಯದ ಉಳಿದೆಡೆ ಈಗ ಜಾರಿಯಲ್ಲಿರುವ ವ್ಯವಸ್ಥೆ ಮುಂದುವರೆಯಲಿದ್ದು, ಈ ನೂತನ ಆದೇಶ ಬೆಂಗಳೂರಿಗೆ ನಗರ ವ್ಯಾಪಿಗೆ ಮಾತ್ರ ಒಳಪಡಲಿದೆ ಎಂದು ತಿಳಿಸಿದ್ದಾರೆ.

ಪರೀಕ್ಷೆ ಕಡ್ಡಾಯ ಶಿಕ್ಷಣ ಕಾಯಿದೆಯ ಅವಕಾಶಗಳಡಿಯಲ್ಲಿ 6-9ನೇ ತರಗತಿಗಳಿಗೆ ಸಂಬಂಧಿಸಿದಂತೆ ಶಾಲೆಗಳು ನಡೆಸಬೇಕಾದ ಮೌಲ್ಯಾಂಕನ ಪರೀಕ್ಷೆಗಳ ಕುರಿತಂತೆ ಮುಂದಿನ ದಿನಗಳಲ್ಲಿ‌ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದೆಂದು ಸಚಿವರು ಸ್ಷಷ್ಟ ಪಡಿಸಿದ್ದಾರೆ.

ಬೆಂಗಳೂರು ನಗರದಲ್ಲಿ 90ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೋರೊನಾ ಸೋಂಕು ತಗುಲಿದ್ದು, ದೃಢಪಟ್ಟ ಹಿನ್ನಲೆ ಒಬ್ಬ ವಿದ್ಯಾರ್ಥಿಯಿಂದ ಹಲವರಿಗೆ ಹಬ್ಬುತ್ತಿದ್ದು, ಮಕ್ಕಳ ಹಿತದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸುರೇಶ್‌ ಕುಮಾರ್‌ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *