ಬೆಂಗಳೂರು | ದೆಹಲಿ ಕರ್ನಾಟಕ ಸಂಘದಲ್ಲಿ 17ರಂದು ಕುವೆಂಪು ಕುರಿತು ವಿಚಾರಸಂಕಿರಣ

ಬೆಂಗಳೂರು: ದೆಹಲಿ ಕರ್ನಾಟಕ ಸಂಘ ಹಾಗೂ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌  ಸಹಯೋಗದಲ್ಲಿ ಇದೇ 17ರಂದು ದೆಹಲಿ ಕರ್ನಾಟಕ ಸಂಘದಲ್ಲಿ ರಾಷ್ಟ್ರಕವಿ ಕುವೆಂಪು ಅವರ ಸಾಧನೆ ಮತ್ತು ಕೊಡುಗೆ ಕುರಿತು ವಿಚಾರಸಂಕಿರಣ ಆಯೋಜಿಸಲಾಗಿದೆ.

ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಹಂ.ಪ. ನಾಗರಾಜಯ್ಯ, ಟ್ರಸ್ಟ್‌ನ ಅಧ್ಯಕ್ಷ ಎಚ್.ಕೆ. ರಾಮು, ‘ಆದಿಚುಂಚನಗಿರಿ ಮಠದ ಪೀಠಾಧಿಪತಿ ನಿರ್ಮಲಾನಂದನಾಥ ಸ್ವಾಮೀಜಿ ಅವರು ವಿಚಾರಸಂಕಿರಣ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ : ಬೆಳಗಾವಿ | ಅಧಿಕಾರಿಗಳಲ್ಲಿ ಯಾವುದೇ ಭಯ ಇಲ್ಲ ಸರಿಯಾಗಿ ಸ್ಪಂದಿಸುವುದಿಲ್ಲ– ಸಿ.ಎಂಗೆ ಶಾಸಕರ ದೂರು

ಬೇಲಿಮಠದ ಶಿವರುದ್ರ ಸ್ವಾಮೀಜಿ, ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ, ರಾಷ್ಟ್ರಕವಿ ಕುವೆಂಪು ಅವರ ಭಾವಚಿತ್ರ ವನ್ನು ಹಾಗೂ ಹಿಂದಿ ಭಾಷೆಗೆ ಅನುವಾದಗೊಂಡಿರುವ ಕುವೆಂಪು ಅವರ ‘ರಾಮಾಯಣ ದರ್ಶನಂ’ ಗ್ರಂಥವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಲಿದ್ದಾರೆ’ ಎಂದರು.

‘ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಜಿ.ಟಿ. ದೇವೇಗೌಡ, ವಿಶ್ರಾಂತ ಕುಲಪತಿ
ಕೆ.ಎಸ್. ರಂಗಪ್ಪ, ದೆಹಲಿ ಕರ್ನಾಟಕದ ಸಂಘದ ಅಧ್ಯಕ್ಷ ಸಿ.ಎಂ. ನಾಗರಾಜ್ ಭಾಗವಹಿಸಲಿದ್ದಾರೆ’ ಎಂದರು.

ಇದನ್ನೂ ನೋಡಿ : ಡ್ರಗ್ಸ್ ಮಾಫಿಯಾ :ಯುವಜನ ಟಾರ್ಗೆಟ್ ಯಾಕೆ? ಪೊಲೀಸರ ಬಲೆಗೆ ಬೀಳದ ಪೆಡ್ಲರ್‌ಗಳು Janashakthi Media

 

Donate Janashakthi Media

Leave a Reply

Your email address will not be published. Required fields are marked *