ಬೆಂಗಳೂರು: ನಗರದ ಸೌಂದರ್ಯವನ್ನು ಕಾಪಾಡುವ ಮಹತ್ವದ ಉದ್ದೇಶದಿಂದ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಳವಡಿಸಲಾಗಿದ್ದ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯನ್ನು ನಡೆಸಲಾಯಿತು.
ಅನಧಿಕೃತ ಫ್ಲೆಕ್ಸ್ ಮತ್ತು ಬ್ಯಾನರ್ ಹಾವಳಿಯನ್ನು ತಡೆಗಟ್ಟಲು ಬಿಬಿಎಂಪಿ (BBMP) ವಿಶೇಷ ಆಯುಕ್ತರಾದ (ಚುನಾವಣೆ) ರಾಜೇಂದ್ರ ಚೋಳನ್ ಅವರು ಅಧಿಕಾರಿಗಳಿಗೆ ನೀಡಿದ್ದಾರೆ
ಇದನ್ನೂ ಓದಿ : ಬೆಂಗಳೂರು | ದೆಹಲಿ ಕರ್ನಾಟಕ ಸಂಘದಲ್ಲಿ 17ರಂದು ಕುವೆಂಪು ಕುರಿತು ವಿಚಾರಸಂಕಿರಣ
ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರ ಆದೇಶ ಹಾಗೂ ಕೇಂದ್ರ ನಗರ ಪಾಲಿಕೆ ಆಯುಕ್ತ ರಾಜೇಂದ್ರ ಚೋಳನ್ ಅವರ ಸೂಚನೆಯಂತೆ, ಬಿಬಿಎಂಪಿಯ ವಿವಿಧ ವಿಭಾಗಗಳ ಕಾರ್ಯಪಾಲಕ ಅಭಿಯಂತರರ ನೇತೃತ್ವದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಮತ್ತು ಬಂಟಿಂಗ್‌ಗಳ ಬೃಹತ್ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಯಿತು.
ಸ್ವಚ್ಛತಾ ಕಾರ್ಯಾಚರಣೆಯಲ್ಲಿ ವಲಯ-1 & 2 ರ ಮುಖ್ಯ ಅಭಿಯಂತರರು, ಅಧೀಕ್ಷಕ ಅಭಿಯಂತರರು, ಘನತ್ಯಾಜ್ಯ ವಿಭಾಗದ ಡಿ.ಜಿ.ಎಂ., ಎ.ಜಿ.ಎಂ. ಗಳು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು ಹಾಗೂ ವಾರ್ಡ್ ಮಾರ್ಷಲ್ ಗಳು, ಪೌರ ಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.
ಇದನ್ನೂ ನೋಡಿ : ಬೆಂಗಳೂರು ಸುರಂಗ ಮಾರ್ಗ ಶ್ರೀಮಂತರಿಗೆ ಮಾತ್ರ ಪ್ರಯೋಜನವೆಂಬ ವಾದದ ಸುತ್ತ… Janashakthi Media
