ಬೆಂಗಳೂರು | ಮಾದಕ ವ್ಯಸನ ಮುಕ್ತಗೊಳಿಸಲು ಜಾಗೃತಿ ಅಭಿಯಾನ ಉದ್ಘಾಟಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು: ಮಾದಕ ವಸ್ತುಗಳ ಮಾರಾಟಗಾರರು, ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಜಾಗೃತಿ ಅಭಿಯಾನ ಕೈಗೊಂಡಿದ್ದು, ವಿಂಟೇಜ್ ಕಾರುಗಳ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು ಸಿಟಿ ಪೊಲೀಸ್‌ ಹಾಗೂ ಫೆಡರೇಷನ್‌ ಆಫ್‌ ಹಿಸ್ಟೋರಿಕ್‌ ವೆಹಿಕಲ್ಸ್‌ ಆಫ್‌ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್‌ ಜಾನ್‌ ರೆಸಾರ್ಟ್‌ ಮತ್ತು ಹೊಟೇಲ್‌ ಸಂಸ್ಥೆ ಆಯೋಜಿಸಿದ್ದ ಡ್ರಗ್ಸ್‌ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್‌ ಕಾರ್‌ ರ‍್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ : ʻನ್ಯಾಷನಲ್ ಹೆರಾಲ್ಡ್ ಪ್ರಕರಣʼ ಹಣದ ವ್ಯವಹಾರವೇ ಇಲ್ಲದ ಮನಿ ಲ್ಯಾಂಡರಿಂಗ್ ಕೇಸ್ – ಪ್ರಿಯಾಂಕ್ ಖರ್ಗೆ

ಡ್ರಗ್ಸ್ ದಂಧೆಕೋರರು ಎಷ್ಟು ಕೀಳು ಮಟ್ಟಕ್ಕೆ ಇಳಿದ್ದಾರೆ ಎಂದರೆ, ಶಾಲೆಗೆ ತೆರಳಿ ಚಾಕೋಲೇಟ್ ಮೂಲಕ ಮಕ್ಕಳಿಗೆ ಉಚಿತವಾಗಿ ಡ್ರಗ್ಸ್ ಹಂಚುತ್ತಿದ್ದಾರೆ. ಮಕ್ಕಳು ಅದಕ್ಕೆ ದಾಸರಾಗುವಂತೆ ಮಾಡುತ್ತಿದ್ದಾರೆ. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಮಾದಕ ವಸ್ತುಗಳ ಬಳಕೆಯಿಂದ ದೂರ ಇರಬೇಕು ಎಂದು ವಿದ್ಯಾರ್ಥಿ, ಐಟಿ ಪದವೀಧರರು ಸೇರಿದಂತೆ ಯುವ ಸಮುದಾಯಕ್ಕೆ ಕರೆ ಕೊಟ್ಟರು.

ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು ಎಂದರು. ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸನ ಮುಕ್ತವಾಯಿತು ಎಂದು ಅರ್ಥವಲ್ಲ. ಅದರ ವಿರುದ್ಧ ಯುದ್ಧ ಆರಂಭಿಸಿದ್ದೇವೆ. ಸರ್ಕಾರ ಮತ್ತು ಪೊಲೀಸರು ಯುದ್ಧ ಮಾಡುತ್ತಿದ್ದಾರೆ. ಇದರ ಪರಿಣಾಮ ಕಳೆದ ವರ್ಷದಿಂದ 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ. ಸಾವಿರಾರು ಜನರನ್ನು ಬಂಧಿಸಿದ್ದು, ಕೆಲವರು ಇನ್ನೂ ಜೈಲಿನಲ್ಲಿದ್ದಾರೆ. ವಿದೇಶದಿಂದ ಶಿಕ್ಷಣಕ್ಕಾಗಿ ಬಂದವರೂ ಇಂಥ ದುಷ್ಕೃತ್ಯಗಳಲ್ಲಿ ತೊಡಗುವುದು ದುರದೃಷ್ಟಕರ ಎಂದರು.

ಈ ವೇಳೆ ವಿಧಾನಸೌಧದ ಮುಭಾಗದಿಂದ ಹೊಟ ವಿಂಟೇಜ್‌ ಕಾರುಗಳ ಈ ಆಕರ್ಷಕ ಮೆರವಣಿಗೆ, ಬಿಗ್‌ ಬನಿಯಾನ್‌ ವೈನ್‌ಯಾರ್ಡ್‌ ಅಂಡ್‌ ರೆಸಾರ್ಟ್‌ ತನಕ ಸಾಗಿತು.

ಇದನ್ನೂ ನೋಡಿ : ಚಿನ್ನಯ್ಯನಿಗೆ ಷರತ್ತುಬದ್ಧ ಜಾಮೀನು!! ರೀ ಓಪನ್ ಆಗುತ್ತಾ ಸೌಜನ್ಯ ಕೇಸ್ ?!!v Janashakthi Media

 

Donate Janashakthi Media

Leave a Reply

Your email address will not be published. Required fields are marked *