ಬೆಂಗಳೂರು | ಮೂಲಸೌಕರ್ಯ ಜೊತೆಗೆ ಪುನರ್‌ವಸತಿ ಕೋಗಿಲು ಬಡಾವಣೆಯ ನಿವಾಸಿಗಳಿಗೆ  ಕಲ್ಪಿಸಿ – ಡಾ. ನಾಗಲಕ್ಷ್ಮೀ ಚೌಧರಿ

ಬೆಂಗಳೂರು: ಮೂಲಸೌಕರ್ಯ ಒದಗಿಸುವ ಜೊತೆಗೆ ಪುನರ್‌ವಸತಿ ಕೋಗಿಲು ಬಡಾವಣೆಯ ನಿವಾಸಿಗಳಿಗೆ  ಕಲ್ಪಿಸಬೇಕು’ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಒತ್ತಾಯಿಸಿದ್ದಾರೆ.

ಮಂಗಳವಾರ ಕೋಗಿಲು ಬಡಾವಣೆಗೆ ಭೇಟಿ ನೀಡಿದ ಅವರು ಸ್ಥಳೀಯರ ಆಹವಾಲು ಸ್ವೀಕರಿಸಿದರು. ‘ಸೂರು ಕಳೆದುಕೊಂಡ ಎಲ್ಲರಿಗೂ ಮೂಲಸೌಲಭ್ಯ ಕಲ್ಪಿಸಬೇಕು’ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇದನ್ನೂ ಓದಿ : ಬೆಂಗಳೂರು | ₹11.20 ಲಕ್ಷದ ಬಹುಮಹಡಿ ಮನೆ ಹಂಚಿಕೆ ಕೋಗಿಲು ಲೇಔಟ್ ನಿವಾಸಿಗಳಿಗೆ ನೀಡಲು ಆದೇಶ

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿರುವ ಅವರು, ಐದು ಎಕರೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಕೋಗಿಲು ಬಡಾವಣೆಯ ನಿವಾಸಿಗಳ ಮನೆ ಹಾಗೂ ಶೆಡ್‌ಗಳನ್ನು ಜಿಬಿಎ ಹಾಗೂ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆಯಿಂದ ತೆರವುಗೊಳಿಸಲಾಗಿದೆ. ಇದರಿಂದ 200ಕ್ಕೂ ಹೆಚ್ಚು ಕುಟುಂಬಗಳು ಬೀದಿಗೆ ಬಿದ್ದಿವೆ. ಮಹಿಳೆಯರು, ಅಂಗವಿಕಲರು, ಮಕ್ಕಳು ಮತ್ತು ವೃದ್ಧರು ಕೃತಕ ಟೆಂಟ್‌ಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇವರಿಗೆ ಶುದ್ಧ ಕುಡಿಯುವ ನೀರು, ಆಹಾರ ಹಾಗೂ ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳನ್ನು ನೀಡಬೇಕು. ಬೆಂಗಳೂರು ನಗರದಲ್ಲಿ ಚಳಿ ತೀವ್ರತೆ ಹೆಚ್ಚಿದ್ದು, ಮಹಿಳೆಯರು, ಮಕ್ಕಳು ಹಾಗೂ ವೃದ್ಧರು ಮನೆಗಳಿಲ್ಲದೇ ಬಯಲು ಪ್ರದೇಶದಲ್ಲಿ ಜೀವನ ನಿರ್ವಹಿಸುತ್ತಿದ್ದಾರೆ. ಮಹಿಳೆಯರು ಹಾಗೂ ಮಕ್ಕಳಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಈ ಕುಟುಂಬಗಳಿಗೆ ತಾತ್ಕಾಲಿಕವಾಗಿ ಪುನರ್‌ವಸತಿ ಕಲ್ಪಿಸಬೇಕು. ಮುಂದಿನ ದಿನಗಳಲ್ಲಿ ಶಾಶ್ವತ ವಸತಿ ಸೌಲಭ್ಯ ಒದಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು’ ಎಂದು ತಿಳಿಸಿದ್ದಾರೆ.

ಇದನ್ನೂ ನೋಡಿ : ಕುವೆಂಪು ಜನ್ಮ ದಿನ | “ಬನ್ನಿ ಬನ್ನಿ ಲೋಕಗುರುಗಳೆಲ್ಲ ಬನ್ನಿ” ಹಾಡು : ಎಚ್.ವಿ. ನಟರಾಜ Janashakthi Media

Donate Janashakthi Media

Leave a Reply

Your email address will not be published. Required fields are marked *