ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ಸಂಗ್ರಹ ಬೆನ್ನಲ್ಲೇ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು:  ಪ್ರಧಾನಿ ನರೇಂದ್ರ ಮೋದಿ ಅವರು ಮೊನ್ನೆಯಷ್ಟೇ ಉದ್ಘಾಟನೆ ಮಾಡಿದ್ದ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ಹೈವೇ ಯಲ್ಲಿ ಅತೀ  ಹೆಚ್ಚು ಟೋಲ್‌ ಸಂಗ್ರಹ ಮಾಡುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್‌ನ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ಹಿನ್ನೆಲೆಯಲ್ಲಿ ಶೇಷಗಿರಿಹಳ್ಳಿ ಹಾಗೂ ಕಣಮಿಣಕಿ ಟೋಲ್ ಪ್ಲಾಜ ಮುಂಭಾಗ ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದ ಪ್ರತಿಭಟನಾಕಾರರು ಪ್ಲಾಜಾಗಳಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದು, ಕೂಡಲೇ ಅವರನ್ನು ಪೊಲೀಸರು ವಶಕ್ಕೆ ಪಡೆದು ಬಸ್‍ಗಳಲ್ಲಿ ಕರೆದೊಯ್ದರು.

ಮುನ್ನೆಚರಿಕಾ ಕ್ರಮವಾಗಿ ಪ್ರತಿಭಟನಾಕರರನ್ನು ಬಂಧಿಸಲು ಮೂರು ಡಿಎಆರ್ ವಾಹನಗಳನ್ನು ಸ್ಥಳದಲ್ಲಿ ಪೊಲೀಸರು ಸಿದ್ದ ಮಾಡಿಕೊಂಡಿದ್ದರು. ಪ್ರತಿಭಟನಾಕರಾರನ್ನು ಎರಡು ಕೆಎಸ್‍ಆರ್‍ಟಿಸಿ ಬಸ್ ಗಳಲ್ಲಿ ಪೊಲೀಸರು ವಶಕ್ಕೆ ಪಡೆದರು.

ಬೆಳಗ್ಗೆ 8 ಗಂಟೆ ಸುಮಾರಿಗೆ ಟೋಲ್ ಸಂಗ್ರಹ ಪ್ರಾರಂಭವಾಗಿದ್ದು, ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಣಮಿಣಕಿ ಹಾಗೂ ರಾಮನಗರ ತಾಲ್ಲೂಕಿನ ಶೇಷಗಿರಿಹಳ್ಳಿ ಬಳಿ ಇರುವ ಟೋಲ್ ಪ್ಲಾಜಾಗಳ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.

ಕಾರು, ಜೀಪು, ವ್ಯಾನ್‍ಗಳ ಏಕಮುಖ ಸಂಚಾರಕ್ಕೆ 135 ರೂ., ದ್ವಿಮುಖ ಸಂಚಾರಕ್ಕೆ 205 ರೂ., ಸ್ಥಳೀಯ ವಾಹನಗಳಿಗೆ 70ರೂ., ತಿಂಗಳ ಪಾಸ್ 4525ರೂ.ಗೆ ನಿಗದಿ ಮಾಡಲಾಗಿದೆ. ಲಘು ವಾಹನ ಹಾಗೂ ಮಿನಿ ಬಸ್‍ಗಳ ಏಕಮುಖ ಸಂಚಾರಕ್ಕೆ 220, ದ್ವಿಮುಖ ಸಂಚಾರಕ್ಕೆ 330, ಸ್ಥಳೀಯ ವಾಹನಗಳಿಗೆ 110, ತಿಂಗಳ ಪಾಸ್ 7315ರೂ.

ಎಕ್ಸ್‌ ಪ್ರೆಸ್‍ ವೇನಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಪೂರ್ಣಗೊಳಿಸಿ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಿ ದರ ನಿಗದಿ ಮಾಡುವಂತೆ ಪ್ರತಿಭಟನಾಕಾರರು ಮನವಿ ಮಾಡಿದ್ದಾರೆ.

ಇದನ್ನೂ ಓದಿ : ಬೆಂ-ಮೈ ಎಕ್ಸ್‌ಪ್ರೆಸ್‌ವೇ – ಟೋಲ್‌ ಸಂಗ್ರಹ ಖಂಡಿಸಿ ಕಾಂಗ್ರೆಸ್‌ ಪ್ರತಿಭಟನೆ

Donate Janashakthi Media

Leave a Reply

Your email address will not be published. Required fields are marked *