ಬೆಂಗಳೂರು: ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಈ ಮೂಲಕ ಗ್ರೇಟರ್ ಬೆಂಗಳೂರು ರಚನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯಿತು. ಈ ಸಭೆಯಲ್ಲಿ ಬೆಂಗಳೂರನ್ನು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
ಇದನ್ನೂ ಓದಿ: ಕೇಂದ್ರ ಬಜೆಟ್ 2024 | ಯಾವುದು ಇಳಿಕೆ, ಯಾವುದು ಏರಿಕೆ?
ಗ್ರೇಟರ್ ಬೆಂಗಳೂರು ಅಥಾರಿಟಿ ಸಲಹೆಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿಯ ಅಧ್ಯಕ್ಷರಾಗಲಿದ್ದಾರೆ.
ಇಂತಹ ವಿಧೇಯಕವನ್ನು ರಾಜ್ಯಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ನಂತ್ರ, ವಿಧಾನಸಭೆಯಲ್ಲಿ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಅಂಗೀಕಾರ ದೊರೆಯುತ್ತಾ ಅಂತ ಕಾದು ನೋಡಬೇಕಿದೆ.
ಇದನ್ನೂ ನೋಡಿ: ರಾಜ್ಯದಲ್ಲಿ ಹದಿನಾಲ್ಕೂವರೆ ಲಕ್ಷ ಸರ್ಕಾರಿ ಜಮೀನು, ಗೋಮಾಳ ಜಮೀನು ಕುರಿತು ಕಂದಾಯ ಸಚಿವ ಸ್ಪಷ್ಟನೆJanashakthi Media