ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 4 ದಿನ ಭಾರಿ ಮಳೆ ನಿರೀಕ್ಷೆ ಇದೆ. ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಭಾರಿ ಮಳೆಯಾಗಲಿದೆ. ಈ ಬಗ್ಗೆ ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಅಲರ್ಟ್ ಘೋಷಿಸಿದೆ.
ರಾಜ್ಯದ ಕೆಲವೆಡೆ ಬಿರುಗಾಳಿ, ಗುಡುಗು ಮಿಂಚಿನ ಸಾಧ್ಯತೆ ಇರಲಿದೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ. ನಾಳೆ ಕೂಡ ಗಾಳಿ ಇದೇ ರೀತಿಯ ವೇಗದಲ್ಲಿ ಇರಲಿದೆ.
ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40 ರಿಂದ 45 ಮೀಟರ್‌ನಿಂದ 55 ಕಿಲೋ ಮೀಟರ್ ವೇಗದಲ್ಲಿ ಬೀಸುವ ವಾತಾವರಣ ಇರಲಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.