ಬೆಳಗಾವಿ | ಅಭಿಪ್ರಾಯ ಸಂಗ್ರಹಿಸಿ : ಚಿಕ್ಕೋಡಿ, ಗೋಕಾಕ್ ಜಿಲ್ಲೆ ರಚನೆಗೆ ಕ್ರಮ – ಸಚಿವ ಕೃಷ್ಣ ಭೈರೇಗೌಡ

ಬೆಳಗಾವಿ: ದೊಡ್ಡ ಜಿಲ್ಲೆಗಳನ್ನು ಆಡಳಿತಾತ್ಮಕವಾಗಿ ನಿರ್ವಹಿಸುವುದು ಕಷ್ಟಕರವಾಗಿರುವುದರಿಂದ, ಜಿಲ್ಲೆಯನ್ನು ವಿಭಜಿಸಿ ಚಿಕ್ಕೋಡಿ ಮತ್ತು ಗೋಕಾಕ್ ಅನ್ನು ನೂತನ ಜಿಲ್ಲೆಗಳನ್ನಾಗಿ ಘೋಷಿಸುವ ಸಂಬಂಧ, ಅಭಿಪ್ರಾಯ ಸಂಗ್ರಹಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಜನಪರ ಆಡಳಿತ ನೀಡಲು ಜಿಲ್ಲಾ ವಿಭಜನೆ ಅಗತ್ಯ ಎಂಬುದು ಸರ್ಕಾರದ ಗಮನಕ್ಕೆ ಬಂದಿದೆ.

ಇದನ್ನೂ ಓದಿ : ಬೆಳಗಾವಿ | ಅಧಿಕಾರಿಗಳಲ್ಲಿ ಯಾವುದೇ ಭಯ ಇಲ್ಲ ಸರಿಯಾಗಿ ಸ್ಪಂದಿಸುವುದಿಲ್ಲ– ಸಿ.ಎಂಗೆ ಶಾಸಕರ ದೂರು

ಜನರಿಗೆ ಉತ್ತಮ ಸೇವೆಗಳನ್ನು ತಲುಪಿಸಲು ಹಾಗೂ ಆಡಳಿತವನ್ನು ಇನ್ನಷ್ಟು ಜನಸ್ನೇಹಿಯಾಗಿಸಲು ಜಿಲ್ಲಾ ವಿಭಜನೆಯ ಬೇಡಿಕೆಗಳು ಸರ್ಕಾರಕ್ಕೆ ಬಂದಿವೆ. ಶಾಸಕ ಐಹೊಳೆ ದುರ್ಯೋಧನ ಮಹಾಲಿಂಗಪ್ಪ ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ಪ್ರಸ್ತುತ ಬೆಳಗಾವಿ ಜಿಲ್ಲೆಯು ವಿಸ್ತಾರವಾಗಿರುವುದರಿಂದ ಆಡಳಿತಾತ್ಮಕ ನಿರ್ವಹಣೆ ಸವಾಲಾಗಿದೆ.  ಬೆಳಗಾವಿ ಜಿಲ್ಲೆಯನ್ನು ಎರಡು ಅಥವಾ ಮೂರು ನೂತನ ಜಿಲ್ಲೆಗಳಾಗಿ ವಿಭಜಿಸಬೇಕೆಂಬ ಹಲವು ಮನವಿಗಳು ಸಲ್ಲಿಕೆಯಾಗಿವೆ ಎಂದು ಅವರು ಮಾಹಿತಿ ನೀಡಿದರು.

ಈ ಸೂಕ್ಷ್ಮ ವಿಷಯವನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕಿದ್ದು, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸುವ ಪ್ರಕ್ರಿಯೆ ನಡೆಯಲಿದೆ. ಸಮಯಾವಕಾಶ ನೋಡಿಕೊಂಡು, ಎಲ್ಲರ ಅಭಿಪ್ರಾಯಗಳನ್ನು ಪಡೆದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಈ ಕುರಿತು ಅಂತಿಮ ತೀರ್ಮಾನ ಕೈಗೊಂಡು ಕಾರ್ಯರೂಪಕ್ಕೆ ತರಲಾಗುವುದು ಎಂದು ಭೈರೇಗೌಡ ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಬಾಲಚಂದ್ರ ಜಾರಕಿಹೊಳಿ ಅವರು ಕೂಡ ನೂತನ ಜಿಲ್ಲೆಗಳ ರಚನೆಯ ಅಗತ್ಯತೆಯ ಬಗ್ಗೆ ಸರ್ಕಾರದ ಗಮನ ಸೆಳೆದು, ಬೇಡಿಕೆಗೆ ಬೆಂಬಲ ವ್ಯಕ್ತಪಡಿಸಿದರು.

ಇದನ್ನೂ ನೋಡಿ : ಡ್ರಗ್ಸ್ ಮಾಫಿಯಾ :ಯುವಜನ ಟಾರ್ಗೆಟ್ ಯಾಕೆ? ಪೊಲೀಸರ ಬಲೆಗೆ ಬೀಳದ ಪೆಡ್ಲರ್‌ಗಳು Janashakthi Media

Donate Janashakthi Media

Leave a Reply

Your email address will not be published. Required fields are marked *