ಬೆಳಗಾವಿ | ಸುವರ್ಣಸೌಧ ಮೆಟ್ಟಿಲುಗಳ ಮೇಲೆ ಸಿ ಎಂ ಸಿದ್ದರಾಮಯ್ಯ ಖಾದಿ ರಾಷ್ಟ್ರೀಯ ಧ್ವಜ ಅನಾವರಣ

ಬೆಳಗಾವಿ: ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಬೆಳಗಾವಿಯ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಅನಾವರಣಗೊಳಿಸಿದರು.

ಈ ಕಾರ್ಯಕ್ರಮದಲ್ಲಿ ವಿಧಾನಸಭೆಯ ಸಭಾಧ್ಯಕ್ಷರಾ ಯು.ಟಿ.ಖಾದರ್ , ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ವಿಧಾನ ಪರಿಷತ್‌  ಮುಖ್ಯ ಸಚೇತಕ ಸಲೀಂ ಅಹ್ಮದ್, ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಸೇರಿದಂತೆ ಅನೇಕ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಡಿ.21 ಬೆಂಗಳೂರಿನಲ್ಲಿ “ಪರ್ಯಾಯ ರಾಜಕಾರಣಕ್ಕಾಗಿ ಸಿಪಿಐ(ಎಂ) ಜನದನಿ ರ‍್ಯಾಲಿ”

ನಂತರ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ತ್ರಿವರ್ಣ ಧ್ವಜವನ್ನು ಜಾರಿಗೆ ತಂದರು. ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಲ್ಲ, ಇದು ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತ. ಭಾರತದ ತ್ರಿವರ್ಣ ಧ್ವಜ ಕೇವಲ ಖಾದಿ ವಸ್ತ್ರವಾಗಿರದೇ, ಭಾರತದ ಹೆಮ್ಮೆ ಮತ್ತು ಸ್ವಾಭಿಮಾನದ ಸಂಕೇತವಾಗಿದೆ. ಈ ಧ್ವಜದಲ್ಲಿ ಮೂರು ವರ್ಣ ಮತ್ತು ಅಶೋಕ ಚಕ್ರವನ್ನು ಒಳಗೊಂಡಿದೆ. ಕೇಸರಿ, ಬಿಳಿ ಮತ್ತು ಹಸಿರು ಬಣ್ಣಗಳಿದ್ದು, ದೇಶದ ಸ್ವಾಭಿಮಾನ, ಆರ್ಥಿಕತೆ ಮತ್ತು ತ್ಯಾಗಬಲಿದಾನ ಹಾಗೂ ಶಾಂತಿಯ ಸಂದೇಶವನ್ನು ಸಾರುವ ಹಾಗೂ ಭಾರತೀಯರಿಗೆ ರಾಷ್ಟ್ರಭಕ್ತಿಯನ್ನು ಸಾರುವ ಸಂದೇಶವನ್ನು ನೀಡುತ್ತದೆ ಎಂದರು. ಬಿಳಿಬಣ್ಣ ಶಾಂತಿ ಮತ್ತು ಸತ್ಯವನ್ನು ಪ್ರತಿನಿಧಿಸಿದರೆ, ಹಸಿರು ಸಮೃದ್ಧಿಯನ್ನು ಬಿಂಬಿಸುತ್ತದೆ. ಅಶೋಕ ಚಕ್ರ ನಿರಂತರವಾಗಿ ದೇಶದ ಆರ್ಥಿಕತೆಯನ್ನು, ಹಾಗೂ ಎಲ್ಲರಿಗೂ ಸಮಾನ ಅವಕಾಶಗಳನ್ನು ಕಲ್ಪಿಸುವುದರ ಸಂಕೇತವಾಗಿದೆ ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ರಾಷ್ಟ್ರಕ್ಕಾಗಿ ತ್ಯಾಗಬಲಿದಾನ, ಹೋರಾಟ ಮಾಡಿದವರನ್ನು ಸ್ಮರಿಸುವುದು ಅಗತ್ಯ. ನಮ್ಮ ರಾಷ್ಟ್ರದ ತ್ರಿವರ್ಣ ಧ್ವಜವನ್ನು ಗೌರವಿಸಿ ಹೆಮ್ಮೆಯಿಂದ ಕಾಣಬೇಕು. ಪ್ರತಿಯೊಬ್ಬರೂ ರಾಷ್ಟ್ರಪ್ರೇಮವನ್ನು ಬೆಳೆಸಿಕೊಳ್ಳಬೇಕು.  ಮಹಾತ್ಮ ಗಾಂಧೀಜಿಯವರ ನೇತೃತ್ವದಲ್ಲಿ ಸ್ವಾತಂತ್ರ ಹೋರಾಟ ನಡೆಯಿತು. ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆಯನ್ನು ಗಾಂಧೀಜಿ ವಹಿಸಿದ್ದರು. ಇದು ನಡೆದು  ನೂರು ವರ್ಷಗಳಾದ ಹಿನ್ನೆಲೆಯಲ್ಲಿ ಕೆಳದ ವರ್ಷ ಬೆಳಗಾವಿಯಲ್ಲಿ ಮಹಾತ್ಮಾ ಗಾಂಧಿಯವರ ಪ್ರತಿಮೆಯನ್ನು ಸುವರ್ಣ ಸೌಧದ ಪಕ್ಕದಲ್ಲಿ ಸ್ಥಾಪಿಸಲಾಗಿದೆ ಎಂದರು.

ನಾವೆಲ್ಲರೂ  ದೇಶಪ್ರೇಮಿಗಳಾಗಬೇಕು. ದೇಶದಲ್ಲಿ ಅನೇಕ ಜಾತಿ, ಧರ್ಮಗಳಿದ್ದು, ನಾವೆಲ್ಲರೂ ಜಾತ್ಯತೀತರಾಗಬೇಕಾಗಿರುವುದು ಅವಶ್ಯಕ. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕೆ ಹೊರತು ದ್ವೇಷಿಸಬಾರದು. ಆಗ ಮಾತ್ರ ಸಮಸಮಜಾ ನಿರ್ಮಾಣ ಸಾಧ್ಯವಾಗುತ್ತದೆ. ಇಲ್ಲದಿದ್ದರೆ ಜಾತ್ಯತೀತ ರಾಷ್ಟ್ರ ನಿರ್ಮಾಣ ಕಷ್ಟವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಎಷ್ಟರಮಟ್ಟಿಗೆ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಸ್ವಾತಂತ್ರ್ಯ ಬಂದು 79 ವರ್ಷಗಳಾಗಿವೆ. ನಾವೆಷ್ಟರಮಟ್ಟಿಗೆ ಭ್ರಾತೃತ್ವ, ದೇಶಪ್ರೇಮ, ಮನುಷ್ಯ ಸಮಾಜವನ್ನು ಈ ದೇಶದಲ್ಲಿ ಸಾಧಿಸಿದ್ದೇವೆ ಎಂದು ಆತ್ಮಾವಲೋಕನ ಮಾಡಿಕೊಳ್ಳಬೇಕು. ಇದಿಲ್ಲದೇ ಹೋದರೆ ಮನುಷ್ಯರಾಗಿ ಬಾಳುವುದು ಸಾಧ್ಯವಿಲ್ಲ. ಎಲ್ಲ ವಿದ್ಯಾರ್ಥಿಗಳಲ್ಲಿ,  ಯುವಕರಲ್ಲಿ ಈ ಮನೋಭಾವ ಬೆಳೆಯಬೇಕು ಎಂದರು.

ಬೆಳಗಾವಿಯ ಸುವರ್ಣಸೌಧದ  ಪಶ್ಚಿಮ ದಿಕ್ಕಿನ ಮೆಟ್ಟಿಲುಗಳ ಮೇಲೆ ಜಗತ್ತಿನ ಎರಡನೇ ಅತಿ ದೊಡ್ಡ ಖಾದಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಲಾಗಿದ್ದು, ಇದಕ್ಕೆ ಕಾರಣರಾದ ವಿಧಾನಸಭಾ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಗೆ ಮತ್ತು ಕಲ್ಬುರ್ಗಿ ಜಿಲ್ಲೆಯ ಕಮಲಾಪುರದ ವಿನೋದ್ ಕುಮಾರ್ ರೇವಪ್ಪ ಬಮ್ಮಣ್ಣ ಅವರ ಕುಟುಂಬಸ್ಥರಿಗೂ ಸರ್ಕಾರದಿಂದ ಮುಖ್ಯಮಂತ್ರಿಗಳು ಅಭಿನಂದಿಸಿದರು.

ಇದನ್ನೂ ನೋಡಿ : ಬೆಂಗಳೂರು ಸುರಂಗ ಮಾರ್ಗ ಶ್ರೀಮಂತರಿಗೆ ಮಾತ್ರ ಪ್ರಯೋಜನವೆಂಬ ವಾದದ ಸುತ್ತ… Janashakthi Media

Donate Janashakthi Media

Leave a Reply

Your email address will not be published. Required fields are marked *