ದೆಹಲಿ: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 1.73, 790 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. 2.84,601 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ದೇಶದಲ್ಲಿ 23,43,152 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,51,78,011 ಸೋಂಕಿತರು ಗುಣಮುಖರಾಗಿದ್ದಾರೆ.
ದೇಶದಲ್ಲಿ ಗುಣಮುಖರಾಗುತ್ತಿರುವವರ ಸಂಖ್ಯೆ 90.80%ರಷ್ಟು ಹೆಚ್ಚಿದೆ.ನಿನ್ನೆಯೊಂದೇ ದಿನ 20,80,048 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 34,11,19,909 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.