ಭಿನ್ನಮತೀಯರಿಗೆ ಬಿಜೆಪಿ ನಂಟಿದೆ ಎಂದ ರಾಹುಲ್ ಗಾಂಧಿ: ಕಪಿಲ್ ಸಿಬಲ್, ಗುಲಾಂನಬಿ ಆಜಾದ್ ಅಸಮಾಧಾನ  

 

 

ನವದೆಹಲಿ: ಪಕ್ಷದ ನಾಯಕತ್ವದಲ್ಲಿ ಸುಧಾರಣೆಯಾಗಬೇಕು ಎಂದು ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವವರಿಗೆ ಬಿಜೆಪಿ ಸಹಕಾರವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ್ದಾರೆಂಬ ಆರೋಪ ಸಂಬಂಧ ಪಕ್ಷದ ಹಿರಿಯ ನಾಯಕರಾದ ಕಪಿಲ್ ಸಿಬಲ್ ಮತ್ತು ಗುಲಾಂ ನಬಿ ಆಜಾದ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೆಲವು ನಾಯಕರು ಪತ್ರ ಬರೆದಿರುವ ಬಗ್ಗೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ (ಸಿಡಬ್ಲ್ಯುಸಿ) ಅಸಮಾಧಾನ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ಅದನ್ನು ಬರೆದಿರುವ ಸಂದರ್ಭದ ಬಗ್ಗೆಯೂ ಪ್ರಶ್ನಿಸಿದ್ದಾರೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ಸಮಯದಲ್ಲಿ ಪತ್ರ ಬರೆಯಲಾಗಿದೆ. ಪತ್ರದಲ್ಲಿ ಏನು ಬರೆಯಲಾಗಿದೆ ಎಂಬುದನ್ನು ಚರ್ಚಿಸಲು ಸರಿಯಾದ ವೇದಿಕೆ ಕಾರ್ಯಕಾರಿ ಸಮಿತಿ ಸಭೆಯೇ ಹೊರತು ಮಾಧ್ಯಮವಲ್ಲ ಎಂದೂ ಹೇಳಿದ್ದಾರೆ.

ಕಪಿಲ್ ಸಿಬಲ್

ಈ ವೇಳೆ ಈ ರೀತಿ ಪತ್ರ ಬರೆದಿರುವವರಿಗೆ ಬಿಜೆಪಿ ನಂಟಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಹೇಳಲಾಗಿತ್ತು.

ಕಪಿಲ್ ಸಿಬಲ್ ಅಸಮಾಧಾನ: ರಾಹುಲ್ ಗಾಂಧಿ ಹೇಳಿಕೆಗೆ ಕಪಿಲ್ ಸಿಬಲ್ ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹೇಳಿಕೆಗೆ ಪ್ರತಿಕ್ರಿಯಿಸಿ ಟ್ವೀಟ್ ಮಾಡಿರುವ ಅವರು, ‘ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ರಾಜಸ್ಥಾನ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಮಣಿಪುರದಲ್ಲಿ ಬಿಜೆಪಿಯನ್ನು ಮಣಿಸಿ ಪಕ್ಷವನ್ನು ಸಮರ್ಥಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯಕ್ಕೆ ಸಂಬಂಧಿಸಿ ಬಿಜೆಪಿ ಪರ ಹೇಳಿಕೆ ನೀಡಿಲ್ಲ. ಆದಾಗ್ಯೂ, ನಾವು ಬಿಜೆಪಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ!’ ಎಂದು ಉಲ್ಲೇಖಿಸಿದ್ದಾರೆ.

Rahul Gandhi says “ we are colluding with BJP “ Succeeded in Rajasthan High Court defending the Congress Party,

Defending party in Manipur to bring down BJP Govt. Last 30 years have never made a statement in favour of BJP on any issue

“ we are colluding with the BJP “

— Kapil Sibal (@KapilSibal) August 24, 2020

ನಂಟಿನ ಆರೋಪ ಸಾಬೀತಾದರೆ  ರಾಜೀನಾಮೆ: ಗುಲಾಂ ನಬಿ ಆಜಾದ್ ಸವಾಲು

ಗುಲಾಂ ನಬಿ ಆಜಾದ್

ರಾಹುಲ್ ಹೇಳಿದ್ದಾರೆ ಎನ್ನಲಾದ ಬಿಜೆಪಿ ನಂಟು ಸಾಬೀತಾದರೆ  ಕಾಂಗ್ರೆಸ್ ರಾಜೀನಾಮೆ ನೀಡುವುದಾಗಿ ಕಾಂಗ್ರೆಸ್ ಹಿರಿಯ ನಾಯಕ ಗುಲಾಂನಬಿ ಆಜಾದ್ ಆಕ್ರೋಶ ಹೊರಹಾಕಿದ್ದಾರೆ.
ಸೋನಿಯಾ ಗಾಂಧಿಗೆ ಪತ್ರ ಬರೆದಿದ್ದ ಹಿರಿಯ ನಾಯಕರಲ್ಲೊಬ್ಬರಾದ, ರಾಜ್ಯಸಭಾ ಸದಸ್ಯ ಗುಲಾಂ ನಬಿ ಆಜಾದ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು,  ನಮ್ಮ ಮೇಲೆ ಈ ರೀತಿ ನೇರವಾಗಿ ಆರೋಪ ಮಾಡಿರುವುದು ಬಹಳ ಬೇಸರ ತರಿಸಿದೆ. ನಮ್ಮ ಜೀವನವನ್ನೇ ಕಾಂಗ್ರೆಸ್ ಪಕ್ಷದಲ್ಲಿ ಕಳೆದಿದ್ದೇವೆ. ಇದುವರೆಗೂ ಪಕ್ಷಕ್ಕೆ ಎಂದಿಗೂ ದ್ರೋಹ ಬಗೆದಿಲ್ಲ. ಒಂದು ವೇಳೆ ನಾವು ಬಿಜೆಪಿಯೊಂದಿಗೆ ಶಾಮೀಲಾಗಿದ್ದೇವೆ ಎಂಬುದು ಸಾಬೀತಾದರೆ ಪಕ್ಷಕ್ಕೆ ರಾಜೀನಾಮೆ ನೀಡಲು ಸಿದ್ಧರಿರುವುದಾಗಿ ಗುಲಾಂ ನಬಿ ಆಜಾದ್ ತಿಳಿಸಿದ್ದಾರೆ.

Donate Janashakthi Media

Leave a Reply

Your email address will not be published. Required fields are marked *