ನೆರೆಯ ಪಾಕಿಸ್ತಾನ ಮತ್ತು ಬಾಂಗ್ಲಾದೇಶದಲ್ಲಿ ಮಂಕಿಪಾಕ್ಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ ಕಟ್ಟೆಚ್ಚರ ವಹಿಸಲು ಸೂಚಿಸಿದೆ.
ಕೇಂದ್ರ ಆರೋಗ್ಯ ಸಚಿವಾಲಯ ವಿದೇಶದಿಂದ ಆಗಮಿಸುವ ಪ್ರಯಾಣಿಕರಲ್ಲಿ ಮಂಕಿಪಾಕ್ಸ್ ಸೋಂಕಿತರನ್ನು ಗುರುತಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೇಶದ ಎಲ್ಲಾ ವಿಮಾನ ನಿಲ್ದಾಣ, ಬಂದರು ಮತ್ತು ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಿದೆ.
ರಾಜ್ಯ ಸರ್ಕಾರಗಳು ಮಂಕಿಪಾಕ್ಸ್ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ಕೂಡಲೇ ಆಸ್ಪತ್ರೆಗಳನ್ನು ಸಜ್ಜುಗೊಳಿಸಲು ಕೇಂದ್ರ ಸರ್ಕಾರ ಸೂಚಿಸಿದೆ. ಅಲ್ಲದೇ ವಿದೇಶೀ ಪ್ರಯಾಣಿಕರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಮಂಕಿಪಾಕ್ಸ್ ಪ್ರಕರಣ ಗುರುತಿಸಲು ಸೂಚಿಸಿದೆ.