ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಅವರು ಇಂದು ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡದಂತೆ ಆಗ್ರಹಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸೋಮವಾರ ಬೆಳಿಗ್ಗೆ ಭೇಟಿ ಮಾಡಿದ್ದಾರೆ.
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ನೀಡದಂತೆ ಆಗ್ರಹಿಸಿದ್ದಾರೆ. ಮುಖ್ಯಮಂತ್ರಿಯವರ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೈಷುಗರ್ ಕಾರ್ಖಾನೆಯನ್ನು ಖಾಸಗಿಗೆ ವಹಿಸುವ ಕುರಿತು ಚರ್ಚೆ ನಡೆಯುತ್ತಿದೆ. ಖಾಸಗಿಗೆ ವಹಿಸದೇ ಸರ್ಕಾರಿ ಸ್ವಾಮ್ಯದಲ್ಲೇ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡುವಂತೆ ಒತ್ತಾಯಿಸಿದ್ದೇನೆ. ಯಾವುದೇ ಕಾರಣಕ್ಕೂ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ವಹಿಸುವ ಪ್ರಸ್ತಾವಕ್ಕೆ ಒಪ್ಪಿಗೆ ನೀಡುವುದಿಲ್ಲ ಎಂಬ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೀಡಿದ್ದಾರೆ’.
40 ವರ್ಷಗಳ ಅವಧಿಗೆ ಸಕ್ಕರೆ ಕಾರ್ಖಾನೆಯನ್ನು ಖಾಸಗಿಗೆ ಗುತ್ತಿಗೆ ನೀಡುವ ಕುರಿತು ಚರ್ಚೆ ಆಗುತ್ತಿದೆ. ಯಾವುದೇ ಒತ್ತಡಕ್ಕೆ ಮಣಿದು ನಿರ್ಧಾರ ಕೈಗೊಳ್ಳಬಾರದು ಎಂದು ಮನವಿ ಮಾಡಲಾಗಿದೆ ಎಂದು ತಿಳಿದರು.