ಮಂಡ್ಯ | ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಕುರಿತು ಜಾಗೃತಿ ಮೂಡಿಸಿ

ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳು, ಗ್ರಾಮ ಪಂಚಾಯಿತಿಗಳು ‘ಗ್ರಾಮೀಣ ಪ್ರದೇಶದ ಜನರಿಗೆ ಜನನ ಮತ್ತು ಮರಣ ಪ್ರಮಾಣ ಪತ್ರದ ಕುರಿತು ಅರಿವು ಇರುವುದಿಲ್ಲ. ಸಾರ್ವಜನಿಕರಿಗೆ ಅರಿವು ಮೂಡಿಸಬೇಕು’ ಎಂದು ಜಿಲ್ಲಾಧಿಕಾರಿ ಕುಮಾರ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆ, ಜಿಲ್ಲಾ ಮಟ್ಟದ ಬೆಳೆ ಕಟಾವು ಪ್ರಯೋಗ ಹಾಗೂ ಕೃಷಿ ಅಂಕಿ ಅಂಶ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇದನ್ನೂ ಓದಿ : ಚನ್ನಗಿರಿ | ಪಿಂಚಣಿ, ಇಎಸ್ಐ ಹಾಗೂ ಪಿಎಫ್ ಸೌಲಭ್ಯವನ್ನು ಬಿಸಿಯೂಟ ತಯಾರಕರಿಗೆ ಸೌಲಭ್ಯ ನೀಡಿ

ಯಾವುದೇ ಕಾರಣಕ್ಕೂ ಜನನ ಪ್ರಮಾಣ ಪತ್ರ ನೀಡುವಲ್ಲಿ ವಿಳಂಬವಾಗಬಾರದು,  ‘ಜನನ ಪತ್ರ ನೀಡಲು ಆಸ್ಪತ್ರೆಗಳಲ್ಲಿ ವಿಳಂಬವಾಗುತ್ತಿದೆ. ಸದರಿ ವರ್ಷ ಜಿಲ್ಲೆಯಲ್ಲಿ 1 ವರ್ಷ ಮೇಲ್ಪಟ್ಟ 30 ಮಕ್ಕಳಿಗೆ ಜನನ ಪ್ರಮಾಣ ಪತ್ರ ನೊಂದಣಿ ಆಗಿಲ್ಲ. ಜನನ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಮಗುವಿನ ತಂದೆ ತಾಯಿ ಹೆಸರು ಹಾಗೂ ವಿಳಾಸವನ್ನು ಖಾತ್ರಿ ಪಡಿಸಿಕೊಂಡು ನೋಂದಣಿ ಮಾಡಬೇಕು’ ಎಂದು ತಿಳಿಸಿದರು.

ಜಿಲ್ಲೆಯ ರೈತರು ಸಾಂಪ್ರದಾಯಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದಾರೆ.  ‘ರೈತರು ಮಿಶ್ರ ಬೆಳೆ ಮತ್ತು ಪರ್ಯಾಯ ಬೆಳೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಮಿಶ್ರಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ರೈತರಿಗೆ ತೋಟಗಾರಿಕಾ ಬೆಳೆಗಳನ್ನು ಬೆಳೆಯಲು ಅರಿವು ಮೂಡಿಸಬೇಕು.  ಸಾಂಪ್ರದಾಯಕ ಬೆಳೆ ಬೆಳೆಯುವುದರಿಂದ ಮಣ್ಣಿನ ಫಲವತ್ತತೆ ಕುಸಿಯುತ್ತದೆ ಎಂಬುದರ ಕುರಿತು ಜಾಗೃತಿ ಮೂಡಿಸಿ’ ಎಂದು ಸೂಚಿಸಿದರು.

ಅಧಿಕಾರಿಗಳು ಸಭೆ ನಡೆಸಿ ತಪ್ಪಾಗಿರುವ ಮಾಹಿತಿಯನ್ನು ತತ್ರಾಂಶದಿಂದ ತೆಗೆದುಹಾಕಬೇಕು. ಈಗಾಗಲೇ ಬೆಳೆ ಸಮೀಕ್ಷೆ ನಡೆಸಲಾಗಿದೆ. ಕೆಲವು ಪ್ರದೇಶಗಳಲ್ಲಿ ಬೆಳೆ ಸಮೀಕ್ಷೆಯ ಮಾಹಿತಿಯನ್ನು ತಪ್ಪಾಗಿ ನಮೂದಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯಲ್ಲಿ ತಪ್ಪು ಮಾಹಿತಿ ಸಲ್ಲಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ತಿಳಿಸಿದರು.

ಭತ್ತ ಮತ್ತು ರಾಗಿ ಬೆಳೆ ಕಟಾವಿನ ವಿಚಾರದಲ್ಲಿ ದಲ್ಲಾಳಿಗಳು ಬೆಕಾಬಿಟ್ಟಿ ದರ ನಿಗದಿ ಪಡಿಸಿ ರೈತರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ, ಸಂಬಂಧಪಟ್ಟ ಅಧಿಕಾರಿಗಳು ಸಭೆ ನಡೆಸಿ ಭತ್ತ ಮತ್ತು ರಾಗಿ ಕಟಾವಿಗೆ ಸೂಕ್ತ ದರ ನಿಗದಿಪಡಿಸಬೇಕು’ ಎಂದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಶ್ರೀನಿವಾಸ್, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಮ್ಮಯ್ಯ, ಡಿಎಚ್‌ಒ ಡಾ.ಕೆ.ಮೋಹನ್, ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ರೂಪಶ್ರೀ ಭಾಗವಹಿಸಿದ್ದರು.

‘ಜನನ ಮತ್ತು ಮರಣವನ್ನು ನೋಂದಣಿ ಮಾಡಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳಿಗೆ ಅಧಿಕಾರವನ್ನು ನೀಡಲಾಗಿದೆ. ಜನನ ಹಾಗೂ ಮರಣ ಸಂಭವಿಸಿದ 30 ದಿನಗಳೊಳಗೆ ಜನನ ಮತ್ತು ಮರಣ ಪತ್ರ ಮಾಡಿಸಿಕೊಳ್ಳಬೇಕು. ಇಲ್ಲವಾದರೆ 30 ದಿನಗಳು ಮೀರಿದರೆ ತಹಶೀಲ್ದಾರ್ ಬಳಿ ತೆರಳಬೇಕು. ಒಂದು ವರ್ಷ ಮೀರಿದರೆ ಕೋರ್ಟ್ ಮೂಲಕ ಪಡೆಯಬೇಕಾಗುತ್ತದೆ’ ಎಂದು ಸಲಹೆ ನೀಡಿದರು.

ಇದನ್ನೂ ನೋಡಿ : ದಲಿತರ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಮಾಡಬೇಡಿ – ರಾಜಗೋಪಾಲ್. ಡಿ.ಎಸ್ Janashakthi Media

 

 

Donate Janashakthi Media

Leave a Reply

Your email address will not be published. Required fields are marked *