ಮತದಾರರಿಗೆ ಉಚಿತ ಉಡುಗೊರೆ-ಹಣದ ಆಮಿಷ: ಕಾನೂನು ಕ್ರಮಕ್ಕೆ ಚುನಾವಣಾ ಆಯೋಗ ಸೂಚನೆ

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಪಕ್ಷದ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ಉಚಿತ ಉಡುಗೊರೆ ಹಾಗೂ ಹಣದ ಆಮಿಷ ಒಡ್ಡುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಚುನಾವಣಾ ಆಯೋಗವು ಈ ಸಂಬಂಧಪಟ್ಟ ಇಲಾಖೆಗಳು ನಿಯಮಾನುಸಾರ ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ಚುನಾವಣಾ ಪೂರ್ವ ಸಿದ್ಧತೆ ಕುರಿತಂತೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಭೆಯಲ್ಲಿ ರಾಜ್ಯ ಮಟ್ಟದ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಭಾಗವಹಿಸಿದ್ದರು.

ಇದನ್ನು ಓದಿ: ಮತ ಸೆಳೆಯಲು ಉಡುಗೊರೆ ನೀಡಿದ ಬಿಜೆಪಿ ಶಾಸಕ; ಕುಕ್ಕರ್‌ ಹಂಚಿದ ಉದಯ್‌ ಗರುಡಾಚಾರ್‌

ವಿವಿಧ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮತದಾರರಿಗೆ ಕುಕ್ಕರ್, ಮದ್ಯ, ಹಣದಂತಹ ಆಮಿಷ ಒಡ್ಡುಲಾಗುತ್ತಿದೆ ಎಂಬ ಅಂಶಗಳು ಮಾಧ್ಯಮಗಳ ಮೂಲಕ ಕಂಡು ಬಂದಿರುವುದರಿಂದ ಕ್ರಮಕ್ಕೆ ಸೂಚಿಸಲಾಗಿದೆ. ಅಲ್ಲದೆ, ಸಾರ್ವತ್ರಿಕ ಚುನಾವಣಾ ಸಂಬಂಧ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಮುಖ್ಯ ಚುನಾವಣಾಧಿಕಾರಿಗಳು ಸೂಚನೆ ನೀಡಿದರು.

ಆಮಿಷಗಳ ಕುರಿತಂತೆ ಸಂಬಂಧಿತ ಇಲಾಖೆಗಳು ತಮ್ಮಲ್ಲಿರುವ ಮಾಹಿತಿಯನ್ನು ಅಂತರ ಇಲಾಖಾ ಮಟ್ಟದಲ್ಲಿ ಹಂಚಿಕೊಳ್ಳುವ ಮೂಲಕ ಚುನಾವಣಾ ಪ್ರಕ್ರಿಯೆಗಳು ಸುಗಮವಾಗಿ ನಡೆಸುವಂತೆ ಸೂಚಿಸಲಾಗಿದೆ. ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿಕೊಂಡು ಹೋಗಬೇಕಾಗಿದೆ. ಅಲ್ಲದೆ, ನೋಂದಾಯಿತ ಪ್ರಕರಣಗಳ ಕುರಿತು ಜಾರಿ ನಿರ್ದೇಶನಾಲಯ ಕ್ರಮಕೈಗೊಳ್ಳಲಿದೆ. ಹಣ ಮತ್ತು ಬಂಗಾರದಂತಹ ಬೆಲೆ ಬಾಳುವ ವಸ್ತುಗಳ ಸಾಗಣಿಕೆ ಮೇಲೆ ನಿಗಾವಹಿಸಬೇಕು. ಮಾದಕ ವಸ್ತುಗಳ ಸಾಗಣಿಕೆ, ಮಾರಾಟದ ಮೇಲೆ ಕಣ್ಣಿಡಬೇಕು, ಇದಕ್ಕೆ ಸಂಬಂಧಿಸಿದಂತೆ ರೈಲು, ಬಂದರು ಹಾಗೂ ವಿಮಾನ ನಿಲ್ದಾಣಗಳಲ್ಲಿ ಇದಕ್ಕಾಗಿ ವಿಶೇಷ ನೋಡಲ್‌ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಮನೋಜ್‌ ಕುಮಾರ್‌ ಮೀನಾ ತಿಳಿಸಿದರು.

ಇದನ್ನು ಓದಿ: ಶಾಸಕ ರಾಮಲಿಂಗರೆಡ್ಡಿ ಅವರಿಂದಲೂ ಮತದಾರರಿಗೆ ಆಮಿಷ: ಜನನಿ ವತ್ಸಲ ಆರೋಪ

ಹಣದ ರೂಪದಲ್ಲಿ ಮತ್ತು ಡಿಜಿಟಲ್ ಪ್ಲಾಟ್‍ಫಾರ್ಮ್‍ಗಳ ಮೂಲಕ ನಡೆಯುವ ಚಲಾವಣೆಗಳ ಮೇಲೆಯೂ ಎಚ್ಚರ ವಹಿಸಬೇಕೆಂದು ತಿಳಿಸಲಾಗಿದ್ದು, ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಸಮಾಜಘಾತುಕ ಭಾಷಣಗಳು, ಸಮಾಜದ ನೆಮ್ಮದಿ ಕದಡುವ ಹಾಗೂ ದ್ವೇಷವನ್ನು ಹರಡುವವರ ಮೇಲೆ ಮತ್ತು ಅಂತಹ ಸಭೆಗಳ ಮೇಲೆ ಕಟ್ಟೆಚ್ಚರ ವಹಿಸಬೇಕು. ಆ ರೀತಿಯ ಘಟನೆಗಳು ಕಂಡು ಬಂದಲ್ಲಿ ಆಯಾ ವ್ಯಾಪ್ತಿಯ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂದು ಸೂಚಿಸಿದರು.

ಉಚಿತ ಉಡುಗೂರೆ ಮತ್ತು ವಿವಿಧ ರೀತಿಯ ವಸ್ತುಗಳನ್ನು ವಿತರಣೆಗಾಗಿ ಮುಂಚಿತವಾಗಿಯೇ ಕೂಪನ್‌ ಗಳನ್ನು ವಿತರಣೆ ನಡೆಯುತ್ತಿರುವ ಬಗ್ಗೆಯೂ ಮಾಧ್ಯಮಗಳ ಮೂಲಕ ವರದಿಯಾಗುತ್ತಿದೆ. ಕಳೆದ ವರ್ಷದ ಈ ಸಮಯದಲ್ಲಿ ಮಾರಾಟವಾದ ಮದ್ಯ ಹಾಗೂ ಪ್ರಸ್ತುತ ಈಗ ಮಾರಾಟವಾಗುತ್ತಿರುವ ಮದ್ಯ ಕುರಿತಂತೆ ಅಬಕಾರಿ ಇಲಾಖೆ ಕಟ್ಟುನಿಟ್ಟಿನ ನಿಗಾವಹಿಸಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿ ಸೂಚನೆ ನೀಡಲಾಗಿದೆ.

ಇಲ್ಲಿ ಕ್ಲಿಕ್‌ ಮಾಡಿ : ಜನಶಕ್ತಿ ಮೀಡಿಯಾ ವಾಟ್ಸ್‌ಪ್‌ ಗುಂಪು ಸೇರಲು ಈ ಲಿಂಕ್‌ ಕ್ಲಿಕ್‌ ಮಾಡಿ

Donate Janashakthi Media

Leave a Reply

Your email address will not be published. Required fields are marked *