ಬೆಂಗಳೂರು: ನಗರದಲ್ಲಿ ಇಂದು ಮತ್ತೊಂದು ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ. ಡೇರಿ ಸರ್ಕಲ್ ಬಳಿ ಇರುವ ಬಮೂಲ್ ನೌಕಕರ ಕ್ವಾರ್ಟರ್ಸ್‌ನೊಳಗಿರುವ 50 ವರ್ಷದ ಕಟ್ಟಡ ಕುಸಿದುಬಿದ್ದಿದೆ.
ನೆನ್ನೆದಿನ ವಿಲ್ಸನ್ ಗಾರ್ಡನ್ ಸಮೀಪದ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಮನೆ ಕುಸಿದು ಬಿದ್ದದ್ದವು. ನಗರದಲ್ಲಿ ಹೀಗೆ ಒಂದಾದ ಮೇಲೊಂದರಂತೆ ದುರಂತ ಸಂಭವಿಸುತ್ತಿರುವುದು ಜನತೆಯಲ್ಲಿ ಆತಂಕಕ್ಕೆ ಒಳಗಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ, ಪೊಲೀಸರು ಬಂದು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಇದನ್ನು ಓದಿ: ಬೆಂಗಳೂರಿನ ಲಕ್ಕಸಂದ್ರದಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ
ದುರಂತದಲ್ಲಿ ನಾಲ್ವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದ್ದು, ಕಟ್ಟಡ ಕುಸಿತದ ವೇಳೆ ಸಿಕ್ಕಿಬಿದ್ದಿದ್ದ ಎರಡು ಶ್ವಾನಗಳನ್ನು ರಕ್ಷಿಸಲಾಗಿದೆ. ಕಟ್ಟಡ ಕುಸಿತದಲ್ಲಿ ಭಾರೀ ಅನಾಹುತ ತಪ್ಪಿದೆ. ಅಕ್ಕಪಕ್ಕದ ಕಟ್ಟಡಗಳಲ್ಲಿ ಬಿರುಕು ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
50 ವರ್ಷ ಹಳೆಯದಾದ ಕಟ್ಟಡ ಇದಾಗಿದ್ದು, ಈ ಕಟ್ಟಡದಲ್ಲಿ 18 ಕುಟುಂಬ ವಾಸವಾಗಿತ್ತು. ಶಿಥಿಲವಾಗಿದ್ದರಿಂದ ಹಲವು ತಿಂಗಳ ಹಿಂದೆಯೇ ಎಲ್ಲರನ್ನೂ ಕಟ್ಟಡದಿಂದ ಖಾಲಿ ಮಾಡಿಸಲಾಗಿತ್ತು. ಅಕ್ಕಪಕ್ಕದ ಕಟ್ಟಡಗಳಲ್ಲಿ ವಾಸವಿದ್ದ ಕೆಎಂಎಫ್ ಸಿಬ್ಬಂದಿ ಕಟ್ಟಡ ಕುಸಿಯಲು ಆರಂಭವಾಗುತ್ತಿದ್ದಂತೆ ಮನೆಯಿಂದ ಹೊರ ಬಂದಿದ್ದಾರೆ. ಅಲ್ಲದೆ, ನಾಳೆ ಕೆಎಂಎಫ್ನಲ್ಲಿ ಮುಖ್ಯಮಂತ್ರಿ ಕಾರ್ಯಕ್ರಮ ನಿಗದಿಯಾಗಿದೆ.