ಮಹಾರಾಷ್ಟ್ರದ ಎಂ.ವಿ.ಎ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ- ಯೆಚುರಿ ಖಂಡನೆ

ನವದೆಹಲಿ : ಮಹಾರಾಷ್ಟ್ರದ ಮಹಾ ವಿಕಾಸ್ ಅಘಾಡಿ’(ಎಂವಿಎ) ಸರಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರಕಾರೀ ಏಜೆನ್ಸಿಗಳು ಮತ್ತು ಬಿಜೆಪಿ ರಾಜ್ಯ ಸರಕಾರೀ ಯಂತ್ರವನ್ನು ದುರುಯೋಗ ಪಡಿಸಿಕೊಳ್ಳಲಾಗುತ್ತಿದೆ ಎಂದು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚುರಿ ಖಂಡಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಎಂದು ಸಿಪಿಐ(ಎಂ) ಪೊಲಿಟ್ ಬ್ಯೂರೋ ಶಿವಸೇನಾ ಪಕ್ಷಕ್ಕೆ ಸೇರಿದ ಶಾಸಕರನ್ನು ಮೊದಲಿಗೆ  ಸೂರತ್‍ಗೆ, ನಂತರ ಗುವಹಾಟಿಗೆ ಹಾರಿಸಿಕೊಂಡು ಹೋಗಿರುವ ರೀತಿ ಅತ್ಯಂತ ಖಂಡನೀಯ ಎಂದು ಹೇಳಿದೆ. ಇವೆರಡೂ ಬಿಜೆಪಿ ಆಳ್ವಿಕೆಯ ರಾಜ್ಯಗಳು. ಇದನ್ನು ಬಿಜೆಪಿ ಎರಡೂ ರಾಜ್ಯಗಳಲ್ಲಿ ಪ್ರಭುತವ ಯಂತ್ರವನ್ನು ಉಪಯೋಗಿಸಿಕೊಂಡು ಮಾಡಲಾಗಿದೆ. ‘ಮಂತ್ರಿಗಳು ಮತ್ತು ಶಾಸಕರ ಮೇಲೆ  ಗುರಿಯಿಡಲು ಕೇಂದ್ರೀಯ ಏಜೆನ್ಸಿಗಳನ್ನು ಕೂಡ ಬಳಸಿಕೊಳ್ಳಲಾಗಿದೆ.  ಈ ಸರ್ಕಾರವನ್ನು ಅಸ್ಥಿರಗೊಳಿಸುವ ಉದ್ದೇಶದಿಂದ ಇದನ್ನು ಮಾಡಲಾಗುತ್ತಿದೆ  ಎಂದು  ಅದು ಹೇಳಿದೆ.

ಪ್ರಭುತ್ವ  ಅಧಿಕಾರದ ಈ ನಾಚಿಕೆಗೆಟ್ಟ ಬಳಕೆಯು ವಿಪಕ್ಷಗಳ ಆಳ್ವಿಕೆಯ ರಾಜ್ಯ ಸರ್ಕಾರಗಳನ್ನು ಬೀಳಿಸುವುದಕ್ಕಾಗಿ ನಡೆಸಿದ ಈ ಹಿಂದಿನ ಪ್ರಯತ್ನಗಳಿಗೆ ಅನುಗುಣವಾಗಿದೆ ಎಂದಿರುವ ಸಿಪಿಐ(ಎಂ) ಪೊಲಿಟ್‍ ಬ್ಯುರೊ ಈ ರೀತಿ ಯ ದುರುಪಯೋಗದ ಮೂಲಕ ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವುದರ ವಿರುದ್ಧ ಪ್ರತಿಭಟಿಸುವಂತೆ ಎಲ್ಲಾ ಪ್ರಜಾಪ್ರಭುತ್ವವಾದಿ ವಿಭಾಗಗಳಿಗೆ  ಪೊಲಿಟ್ ಬ್ಯೂರೋ ಕರೆ ನೀಡಿದೆ.

Donate Janashakthi Media

Leave a Reply

Your email address will not be published. Required fields are marked *