ಮಹಿಳೆಯರ ಮೇಲಿನ ದೌರ್ಜನ್ಯ ಕ್ಷಮಿಸಲು ಅಸಾಧ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಕೋಲ್ಕತಾದಲ್ಲಿ ವೈದ್ಯೆ ಮೇಲಿನ ಹತ್ಯೆ ಪ್ರಕರಣದ ಕುರಿತು ಮೊದಲ ಬಾರಿ ಪ್ರತಿಕ್ರಿಯಿಸಿದ್ದಾರೆ.
ಮಹಾರಾಷ್ಟ್ರದ ಜಲ್ಗಾಂವ್ ನಲ್ಲಿ ಭಾನುವಾರ ನಡೆದ ಲಕ್ ಪತಿ ದೀದಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗುವ ಆರೋಪಿ ಎಷ್ಟೇ ದೊಡ್ಡವನಾಗಿದ್ದರೂ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಮಹಿಳೆಯರ ಸುರಕ್ಷತೆ ಅತ್ಯಂತ ಪ್ರಮುಖವಾದುದು. ಈ ಹಿನ್ನೆಲೆಯಲ್ಲಿ ನಾನು ಎಲ್ಲಾ ರಾಜ್ಯಗಳಿಗೆ ಮಹಿಳೆಯರ ಸುರಕ್ಷತೆ ಕುರಿತು ಕಠಿಣ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದರು.
ಲಕ್ ಪತಿ ದೀದಿ ಕಾರ್ಯಕ್ರಮ ಮಹಿಳೆಯರು ಸ್ವಾವಲಂಬನೆಗೆ ರೂಪಿಸಿದ ಯೋಜನೆಯಾಗಿದ್ದು, ಕೃಷಿ ಮತ್ತಿತರ ಕೆಲಸಗಳ ಮೂಲಕ ಮಾಸಿಕ ಕನಿಷ್ಠ 10 ಸಾವಿರ ರೂ. ಆದಾಯ ಗಳಿಸಬಹುದಾಗಿದೆ ಎಂದು ಅವರು ಹೇಳಿದರು.