ಮೂರು ಸಾವಿರ ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಒನ್ ಯೋಜನೆ ಜಾರಿಗೆ

ಬೆಂಗಳೂರು: ರಾಜ್ಯದ 12 ಜಿಲ್ಲೆಗಳ 3 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಆರಂಭಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬುಧವಾರ ನಡೆದ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಜನರ ಬಳಿಗೆ ಸರ್ಕಾರದ ಸೇವೆ ಮತ್ತು ಸೌಲಭ್ಯಗಳನ್ನು ತಲುಪಿಸುವ ಮಹದುದ್ದೇಶದಿಂದ ಇಂದು ಮಧ್ಯಾಹ್ನ 12 ಗಂಟೆಗೆ ‘ಗ್ರಾಮ್ ಒನ್’ ಯೋಜನೆ ಉದ್ಘಾಟನೆ ಮಾಡಲಾಗುತ್ತದೆ. ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಸ್ಥಳದಲ್ಲಿ ಕೇಂದ್ರ ತೆರೆದು ಜಾತಿ, ಆದಾಯ ಪ್ರಮಾಣಪತ್ರ, ಬ್ಯಾಂಕಿಂಗ್ ಸೇರಿ ಹಲವು ಸೇವೆಗಳನ್ನು ನೀಡಲಾಗುತ್ತದೆ. ಮೊದಲ ದಿನ 12 ಜಿಲ್ಲೆಗಳ 3 ಸಾವಿರ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮ ಒನ್ ಯೋಜನೆ ಆರಂಭಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಣೆ ಮಾಡಲಾಗುವುದು. ಈ ಕ್ರಾಂತಿಕಾರಿ ಕಾರ್ಯಕ್ರಮಕ್ಕೆ ಸಹಕಾರ ನೀಡಿ ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಪ್ರತಿಯೊಂದು ರಾಜ್ಯ ಮತ್ತು ಪ್ರತಿಯೊಬ್ಬ ಜನತೆ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು. ದೇಶ ಮೊದಲು ಎಂಬ ನೀತಿಯನ್ನು ಅನುಸರಿಸಬೇಕು. ಸಂವಿಧಾನ ಕೊಟ್ಟಿರುವ ಹಕ್ಕುಗಳನ್ನು ಪಡೆಯುವ ನಾವು ಸಂವಿಧಾನದ ಕರ್ತವ್ಯಗಳನ್ನು ಪಾಲಿಸಬೇಕು. ನಮ್ಮ ರಾಜ್ಯ ದೇಶದ ಒಕ್ಕೂಟದಲ್ಲಿ ಪ್ರಭಲ ರಾಜ್ಯವಾಗಿದ್ದು, ಆರ್ಥಿಕ, ಸಾಮಾಜಿಕ, ಕರಕುಶಲ ಮತ್ತು ಸಾಂಸ್ಕೃತಿಕವಾಗಿ ಕೊಡುಗೆ ನೀಡುತ್ತಿದ್ದು, ಇದನ್ನು ಉಳಿಸಿ ಬೆಳೆಸಿಕೊಂಡು ಹೋಗಲಾಗುವುದು ಎಂದರು.

Donate Janashakthi Media

Leave a Reply

Your email address will not be published. Required fields are marked *