ಮೈಸೂರು ದಸರಾ: ನಾಳೆ ಮೈಸೂರು ಪ್ರವೇಶಿಸಲಿರುವ ಗಜಪಡೆ

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿಗಾಗಿ ದಸರಾ ಗಜಪಡೆ ಬುಧವಾರ ಮೈಸೂರಿಗೆ ಆಗಮಿಸಲಿದೆ.

ಮೈಸೂರಿನ ಅರಣ್ಯ ಭವನದ ಆವರಣಕ್ಕೆ ಕ್ಯಾಪ್ಟನ್ ಅಭಿಮನ್ಯು ಹಾಗೂ ತಂಡ ಆಗಮಿಸಲಿದೆ. ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪಯಣ ಸಮಾರಂಭ ನಡೆಯಲಿದೆ.

ಬುಧವಾರ ಬೆಳಗ್ಗೆ 10.20ರಿಂದ 10.45ರೊಳಗಿನ ಶುಭ ಮುಹೂರ್ತದಲ್ಲಿ ಗಜಪಡೆಗೆ ಪುಷ್ಪಾರ್ಚನೆ ನಡೆಯಲಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಾ. ಮಹದೇವಪ್ಪ, ಸ್ಥಳೀಯ ಶಾಸಕರು ಭಾಗವಹಿಸಲಿದ್ದಾರೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಆಗಮಿಸಲಿವೆ. ನಂತರ ಎರಡನೇ ಹಂತದಲ್ಲಿ 5 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಹೆಚ್ಚುವರಿಯಾಗಿ 4 ಮೀಸಲು ಆನೆಗಳನ್ನು ಅಧಿಕಾರಿಗಳು ಗುರುತಿಸಿದ್ದಾರೆ. ಅಗತ್ಯವಿದ್ದರೆ ಮಾತ್ರ ಮೀಸಲು ಆನೆಗಳನ್ನು ಕರೆತರಲು ತೀರ್ಮಾ‌ನ ಕೈಗೊಳ್ಳಲಾಗಿದೆ. ಆನೆಗಳು, ಮಾವುತರ ವಾಸ್ತವ್ಯಕ್ಕಾಗಿ ಅರಮನೆ ಆವರಣದಲ್ಲಿ ವ್ಯವಸ್ಥೆ ಮಾಡಲಾಗಿದೆ.

Donate Janashakthi Media

Leave a Reply

Your email address will not be published. Required fields are marked *