ಲಖನೌ : ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಕೋರೊನ ಪರೀಕ್ಷೇ ಪಾಸಿಟೀವ್ ಬಂದಿದೆ. ಆರಂಭಿಕ ರೋಗಲಕ್ಷಣಗಳು ಕಾಣಿಸಿಕೊಂಡ ಕಾರಣ ಕೊವೀಡ್ ಪರೀಕ್ಷೆ ನಡೆಸಿದ್ದೇನೆ ವರದಿ ಪಾಸಿಟಿವ್ ಬಂದಿದೆ ಎಂದು ತಿಳಿಸಿದ್ದಾರೆ.
ನಿನ್ನೆಯಿಂದಲೇ ಸೆಲ್ಫ್ ಐಸೋಲೇಷನ್ ಮಾಡಿಕೊಂಡಿದ್ದೇನೆ, ನಾನು ಸ್ವಯಂ ನಿರ್ಬಂಧದಲ್ಲಿದ್ದು, ವೈದ್ಯರ ಸಲಹೆಯನ್ನು ಅನುಸರಿಸುತ್ತಿದ್ದೇನೆ. ನಾನು ಜವಾಬ್ದಾರಿಗಳನ್ನು ಆನ್‌ಲೈನ್ ಮೂಲಕವೇ ನಿರ್ವಹಿಸುತ್ತಿದ್ದೇನೆ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಎಲ್ಲಾ ಚಟುವಟಿಕೆಗಳನ್ನು ಸಾಮಾನ್ಯವಾಗಿ ನಡೆಸಲಾಗುತ್ತಿದೆ. “ಏತನ್ಮಧ್ಯೆ, ನನ್ನೊಂದಿಗೆ ಸಂಪರ್ಕಕ್ಕೆ ಬಂದವರೆಲ್ಲರೂ ತಮ್ಮನ್ನು ತಾವೇ ಪರೀಕ್ಷಿಸಿಕೊಳ್ಳಬೇಕು ಮತ್ತು ಮುನ್ನೆಚ್ಚರಿಕೆ ವಹಿಸಬೇಕು” ಎಂದು ಅವರು ಹೇಳಿದರು.
ಲಾಕ್‌ಡೌನ್ ಮಾನದಂಡಗಳನ್ನು ಪಾಲಿಸಬೇಕು ಮತ್ತು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಅವರು ಜನರಿಗೆ ಮನವಿ ಮಾಡಿದರು. ಜನರ ಜೀವ ಮತ್ತು ಜೀವನೋಪಾಯವನ್ನು ಉಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಯುಪಿ ಯಲ್ಲಿ ಕರೋನವೈರಸ್ ಪ್ರಕರಣಗಳು ಶೀಘ್ರಗತಿಯಲ್ಲಿ ಹೆಚ್ಚಾಗುತ್ತಿದ್ದಂತೆ, ಇತರ ಅನೇಕ ನಾಯಕರು ಕೋವಿಡ್ ಪರೀಕ್ಷೆಯನ್ನು ಮಾಡಿಕೊಂಡಿದ್ದಾರೆ. ಇಂದು ಮುಂಚೆಯೇ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಉತ್ತರ ಪ್ರದೇಶದ ಸಚಿವ ಅಶುತೋಷ್ ಟಂಡನ್ ಸಹ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದರು.
प्रदेश सरकार की सभी गतिविधियां सामान्य रूप से संचालित हो रही हैं।
इस बीच जो लोग भी मेरे संपर्क में आएं हैं वह अपनी जांच अवश्य करा लें और एहतियात बरतें।
— Yogi Adityanath (@myogiadityanath) April 14, 2021